ಮುಂಬೈ:ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಸಾರ್ವಜನಿಕ ಅಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಒದಗಿಸಲು ನಿರ್ಧರಿಸಿದೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಹಕ್ಕು ನೀತಿಗೆ ಒಪ್ಪಿಗೆ ಸೂಚಿಸಾಗಿದೆ. ರಾಜ್ಯದ 2,418 ಅಸ್ಪತ್ರೆಗಳಲ್ಲಿ ಈ ಸೌಲಭ್ಯ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಯೋಜನೆ ಆಗಸ್ಟ್ 15 ರಿಂದ ಜಾರಿಯಾಗುವ ಸಾಧ್ಯತೆ ಇದೆ.
ಗ್ರಾಮೀಣ ಆಸ್ಪತ್ರೆಗಳು,ಪ್ರಾಥಮಿಕ ಆರೋಗ್ಯ ಕೇಂದ್ರಗಳು , ಮಹಿಳಾ ಆಸ್ಪತ್ರೆಗಳು ಜಿಲ್ಲಾ ಜನರಲ್ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಸಿಕ್ ಮತ್ತು ಅಮರಾವತಿಯ ಕ್ಯಾನ್ಸರ್ ಆಸ್ಪತ್ರೆಗಳು ಸಹ ಉಚಿತವಾಗಿ ಚಿಕಿತ್ಸೆ ನೀಡುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ನೂಹ್ನಿಂದ ಗುರುಗ್ರಾಮ್ ವರೆಗೆ ಕೋಮುದಳ್ಳುರಿ –“ಕೋಮು ಧ್ರುವೀಕರಣದ ಸಂಘಟಿತ ಪ್ರಯತ್ನ”
ಈ ಯೋಜನೆಯಡಿ 2.5 ಕೋಟಿಗೂ ಅಧಿಕ ಮಂದಿ ಚಿಕಿತ್ಸೆ ಪಡೆಯಬಹುದಾಗಿದೆ.ಆದರೆ ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.