ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ

ಬೆಂಗಳೂರು: ಚಿತ್ರದುರ್ಗದ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟಿರುವ ಮೂವರು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಮಹಿಳೆ ಸಾವು: ತನಿಖೆಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕಾವಾಡಿಗರಹಟ್ಟಿ ಎಸ್‌ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕರಣಕ್ಕೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ಮಂಜುಳಾ, ಪ್ರವೀಣ್ ಮತ್ತು ರಘು ಅವರ ಕುಟುಂಬಗಳಿಗೆ ತಲಾ 5 ಲಕ್ಷದಂತೆ 15 ಲಕ್ಷ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ

Donate Janashakthi Media

Leave a Reply

Your email address will not be published. Required fields are marked *