ಹೊಲಗೇರಿ ಪದ ಬಳಕೆ: ಜಾತಿ ನಿಂದನೆ ಆರೋಪದಡಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ಹೊಲಗೇರಿ ಪದ ಬಳಸುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ತೋಟಗಾರಿಗೆ ಹಾಗೂ ಗಣಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ಪೊಲೀಸ್‌ ದೂರು ದಾಖಲಾಗಿದೆ.

ಸಚಿವರ ವಿರುದ್ಧ ಬೆಂಗಳೂರಿನ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಎಸ್ ಸಿ ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರು ನೀಡಲಾಗಿದೆ. ಸಚಿವರಾದ ಕಾರಣ ಅವರ ಮೇಲೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕಾಗಿದೆ. ಆದ್ದರಿಂದ ಅವರ ವಿರುದ್ಧದ ದೂರನ್ನು ಪಡೆದು ಅದನ್ನು ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿಪರಿಶಿಷ್ಟ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ : ನಟ ಉಪೇಂದ್ರ ವಿರುದ್ಧ ಪ್ರಕರಣ ದಾಖಲು

ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನ ನಡೆಸಿದ್ದರು. ಈ ಸಂದರ್ಶನದ ವೀಡಿಯೊದಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ನಗರದ ಅಶೋಕ್‌ ಥಿಯೇಟರ್‌ ಬಳಿ ನಿರ್ಮಾಣಗೊಂಡಿರುವ ಅಂಡರ್‌ ಪಾಸ್‌ ಬಗ್ಗೆ ಅಭಿಪ್ರಾಯ ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಸ್‌ಎಸ್‌ ಮಲ್ಲಿಕಾರ್ಜುನ ಅವರು, ” ಹಲವು ಬಾರಿ ನಾನು ಪ್ರಶ್ನೆ ಮಾಡಿದ್ದೆ, ಸಂಬಂಧಪಟ್ಟ ಇಂಜಿನಿಯರ್ ಗಳನ್ನು ತರಾಟೆಗೆ ತೆಗೆದುಕೊಂಡಿದ್ದೆ. ಊರನ್ನು ಹೊಲೆಗೇರಿ ಮಾಡಬೇಡಿ ಎಂದು ಹೇಳಿದ್ದೆ” ಎಂದು ಹೇಳಿದ್ದರು.

ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಊರನ್ನು ಹೊಲಗೇರಿ ಮಾಡಿದ್ದಾರೆ ಎಂದು ಹೇಳಿದ ವೀಡಿಯೋ ವೈರಲ್ ಆಗುತ್ತಿದ್ದಾಂತೆ, ಈ ಹೇಳಿಕೆಯನ್ನು ತಿರುಚಿದ್ದಾರೆ, ನಾನು ಆ ರೀತಿಯಾಗಿ ಹೇಳಿಲ್ಲ ಎಂದು ಮಂಗಳವಾರ ದಾವಣಗೆರೆಯಲ್ಲಿ ಸಚಿವರು ಅ ವಿಡಿಯೋದಲ್ಲಿ ಗಾಧೆ ಮಾತನ್ನು ನಾನು ಬಳಸಿಲ್ಲ, ಒಳ್ಳೇದು ಮಾಡಿ ಹೊಲಸು ಮಾಡಬೇಡಿ ಹೇಳಿದ್ದೇವೆ ಅಷ್ಟೇ. ಅದನ್ನು ಅದನ್ನು ಸಾಮಾಜಿಕ ಜಾಲತಾಣದಲ್ಲಿ ತಿರುಚಲಾಗಿದೆ” ಎಂದು ಎಸ್ ಎಸ್ ಮಲ್ಲಿಕಾರ್ಜುನ್‌ ಜಾರಿಕೊಂಡರು.

 

 

Donate Janashakthi Media

Leave a Reply

Your email address will not be published. Required fields are marked *