ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ಆಸರೆಯಾಗಿ ನಿಲ್ಲುತ್ತೇವೆ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ:ಎಷ್ಟೇ ಕಷ್ಟವಾದರೂ ಸಂವಿಧಾನ ಉಳಿಸಿಕೊಳ್ಳುವ ಕೆಲಸ ಮಾಡಬೇಕು:ಸಿಎಂ ಸಿದ್ದರಾಮಯ್ಯ

ಈ ಕುರಿತು ಎಕ್ಸ್‌ನ ಮೂಲಕ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ,ಚಾಮರಾಜನಗರ,ಚಿಕ್ಕಮಗಳೂರು,ಬಳ್ಳಾರಿ,ಕಲಬುರ್ಗಿ,ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *