ಇಂಫಾಲ್: ಮಣಿಪುರದಲ್ಲಿ ಜನಾಂಗೀಯ ಸಂಘರ್ಷದ ಹಿಂಸಾಚಾರ ಮುಂದುವರೆದಿದ್ದು, ಶುಕ್ರವಾರ ಉಖ್ರುಲ್ ಜಿಲ್ಲೆಯ ಕುಕಿ ಥೋವಯಿ ಗ್ರಾಮದಲ್ಲಿ ಗುಂಡಿನ ದಾಳಿಯ ನಂತರ ಮೂವರು ಯುವಕರು ಶವಗಳು ವಿರೂಪಗೊಳಿಸಿರುವ ಸ್ಥಿತಿಯಲ್ಲಿ ದೊರಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಿಟನ್ ಪೊಲೀಸ್ ಠಾಣಾ ವ್ಯಾಪ್ತಿಯ ಈ ಹಳ್ಳಿಯಲ್ಲಿ ನಸುಕಿನಲ್ಲಿ ಗುಂಡಿನ ದಾಳಿಯ ಭಾರಿ ಶಬ್ದ ಕೇಳಿಬಂತು ಸುತ್ತಮುತ್ತಲಿನ ಗ್ರಾಮಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಪೊಲೀಸರು ಶೋಧ ನಡೆಸಿದಾಗ, 24ರಿಂದ 35 ವರ್ಷ ವಯಸ್ಸಿನ ಮೂವರು ಯುವಕರ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:ಮಣಿಪುರ ಹಿಂಸಾಚಾರ ಭುಗಿಲೆದ್ದ ನಂತರ 10 ರಾಷ್ಟ್ರ, 10 ರಾಜ್ಯಗಳನ್ನು ಸುತ್ತಾಡಿದ್ದ ಪ್ರಧಾನಿ ಮೋದಿ!
ಚಾಕುಗಳನ್ನು ಬಳಸಿ ಮಾಡಿರುವ ಗಾಯಗಳ ಗುರುತುಗಳು ಮೂರು ಶವಗಳ ಮೇಲಿವೆ.ಅಲ್ಲದೆ ಕೈ ಕಾಲುಗಳನ್ನು ಕತ್ತರಿಸಿ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತೇಯಿ ಸಮುದಾಯದವರು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದು,ಇವರ ಮೀಸಲಾತಿ ಬೇಡಿಕೆಯನ್ನು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ,ರಾಜ್ಯದ ಜನಸಂಖ್ಯೆಯಲ್ಲಿ ಶೇ40ಕ್ಕಿಂತ ಸ್ವಲ್ಪ ಹೆಚ್ಚಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ವಿರೋಧಿಸಿ ಪ್ರತಿಭಟನೆ ನಡೆಸಿದವು. ಮೇ 3ರಂದು ಆರಂಭವಾಗಿದ್ದ ಹಿಂಸಾಚಾರ ಆ ಬಳಿಕ ಮಣಿಪಿರದ ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ತಿಳಿಕೊಂಡಿಲ್ಲ.