ಚಂದ್ರಯಾನ-3:ಆಗಸ್ಟ್‌ 23 ಬಾಹ್ಯಾಕಾಶ ‌ವಿಜ್ಞಾನ ದಿನ ಎಂದು ಘೋಷಿದ ಮೋದಿ

ಬೆಂಗಳೂರು: ಚಂದ್ರಯಾನ-3 ಲ್ಯಾಂಡರ್‌ ಚಂದ್ರನ ದಕಿಣದ ದ್ರುವನ ಮೇಲಿಳಿದ  ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಪೀಣ್ಯದಲ್ಲಿರುವ ಇಸ್ರೊ ಕಮಾಂಡಿಂಗ್‌ ಸೆಂಟರ್‌ನಲ್ಲಿ ಚಂದ್ರಯಾನ 3 ರ ಯಶಸ್ವಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿದರು. ನಂತರ ಮಾತನಾಡಿದ ಅವರು ಆರಸ್ಟ್‌ 23 ಆ ಕ್ಷಣ ಭಾರತದ ಪಾಲಿಗೆ ಅವಿಸ್ಮರಣೀಯವಾದುದ್ದು. ಈ ಐತಿಹಾಸಿಕ ಸಾಧನೆಯನ್ನು ಸ್ಮರಿಸುವುದಾಕ್ಕಾಗಿ ಆ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಹೇಳಿದರು.

ವಿಕ್ರಮ್ಲ್ಯಾಂಡರ್ ಇಳಿದ ಸ್ಥಳಕ್ಕೆಶಿವಶಕ್ತಿ ಪಾಯಿಂಟ್’ ಎಂದು ನಾಮಕರಣ

ಚಂದ್ರಯಾನ-3 ಯಶಸ್ಸಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪೀಣ್ಯದಲ್ಲಿನ ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ  ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳಕ್ಕೆ ‘ಶಿವಶಕ್ತಿ ಪಾಯಿಂಟ್’ ಅಂತಾ ಕರೆಯೋಣ ಎಂದರು. ಹಾಗೂ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಘೋಷಿಸಿದರು.

ಇದನ್ನೂ ಓದಿ:ಚಂದ್ರಯಾನ-3 ಲ್ಯಾಂಡರ್‌ನಿಂದ ರೋವರ್‌ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೊ

ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ನಾಮಕರಣ

ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.

ಇದೇ ವೇಳೆ ಮೋದಿಯವರು ಮಹಿಳಾ ವಿಜ್ಞಾನಿಗಳನ್ನು ಕೊಂಡಾಡಿದರು “ಮಹಿಳಾ ವಿಜ್ಞಾನಿಗಳು ಚಂದ್ರಯಾನ 3 ರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ‘ಶಿವಶಕ್ತಿ’ ಪಾಯಿಂಟ್ ಮುಂಬರುವ ಪೀಳಿಗೆಗೆ ವಿಜ್ಞಾನವನ್ನು ಜನರ ಕಲ್ಯಾಣಕ್ಕಾಗಿ ಬಳಸಲು ಪ್ರೇರೇಪಿಸುತ್ತದೆ. ಜನರ ಕಲ್ಯಾಣವು ನಮ್ಮ ಸರ್ವೋಚ್ಚ ಬದ್ಧತೆಯಾಗಿದೆ” ಹೇಳಿದರು. ನಿಮ್ಮನ್ನು ಭೇಟಿಯಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಪ್ರತಿಯೊಬ್ಬ ವಿಜ್ಞಾನಿಗೂ ನನ್ನಿಂದ ಸಲ್ಯೂಟ್​​.ಸದ್ಯ ಭಾರತ ಚಂದ್ರನ ಮೇಲಿದೆ. ದೇಶದ ಘನತೆಯನ್ನು ಉತ್ತುಂಗಕ್ಕೇರಿಸಿದ್ದಕ್ಕೆ ಧನ್ಯವಾದಗಳು ಎಂದರು.

Donate Janashakthi Media

Leave a Reply

Your email address will not be published. Required fields are marked *