ಛೇ, ಮಿನಿಮಮ್ ಗೌರವ ಇಲ್ಲದಾಯಿತೇ? ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್‌

ಬೆಂಗಳೂರು: ಇಸ್ರೋ ಭೇಟಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಸಿಗದೆ ಬ್ಯಾರಿಕೇಡ್ ಆಚೆ ನಿಂತು ಕೈಬೀಸಿದ ರಾಜ್ಯ ಬಿಜೆಪಿ ನಾಯಕರ ಸ್ಥಿತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿ, ಅನೇಕರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಮೋದಿಯತ್ತ ಕೈಬೀಸುತ್ತಿರುವ ಫೋಟೋವನ್ನು ಶೇರ್​ ಮಾಡಿಕೊಂಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ನಾಯಕರ ಕಾಲೆಳೆದಿದೆ. ​

ಈ ಕುರಿತು ಎಕ್ಷ್ (ಟ್ವಿಟರ್​)​ ಖಾತೆಯಲ್ಲಿ ಫೋಟೋ ಶೇರ್​ ಮಾಡಿಕೊಂಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ:ಇಸ್ರೊ ಕಚೇರಿಗೆ ಮೋದಿ ಭೇಟಿ:ಬೆಂಗಳೂರು ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ

 

 

ಟ್ವೀಟ್ ಮೂಲಕ ಬಿಜೆಪಿ ನಾಯಕರನ್ನು ‘ ಬ್ಯಾರಿಕೇಡ್ ಬಂಧಿಗಳು’ ಎಂದು ಕುಟುಕಿದ ಖರ್ಗೆ, ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ತಿವಿದಿದ್ದರು.

ರಾಜಕೀಯವಾಗಿ, ಸೈದ್ದಾಂತಿಕವಾಗಿ ವಿರೋಧಿಗಳಾಗಿದ್ದರೂ ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಎಂದೂ ಟ್ವಿಟ್ ಮಾಡಿ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದರು.

ನೂರು ದಿನಗಳಾದರೂ ಕೂಡಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ತೀಕ್ಷ್ಣವಾಗಿ ಟೀಕಿಸಿರುವ ಅವರು ಹೈಕಮಾಂಡ್ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ? ಎಂದು ಪ್ರಶ್ನಿಸಿ ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ ಎಂದು ಹೇಳಿದ್ದರು.

Donate Janashakthi Media

Leave a Reply

Your email address will not be published. Required fields are marked *