ಆಶ್ರಯ ಸಮಿತಿಗೆ ಯತೀಂದ್ರ ನೇಮಕ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಕಾಂಗ್ರೆಸ್‌ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟವು ಅಭಿವೃದ್ಧಿ ಕಾರ್ಯಕ್ರಮಗಳ ( ಕೆಡಿಪಿ)ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬಿಜೆಪಿ ಸರ್ಕಾರದ ಕೋವಿಡ್ ಹಗರಣ: ತನಿಖೆಗೆ ಆಯೋಗ ರಚಿಸಿದ ಸರ್ಕಾರ

ಕೆಡಿಪಿ, ಆಶ್ರಯ ಸಮಿತಿಗೆ ಯತೀಂದ್ರರನ್ನು ನೇಮಕ ಮಾಡಿರುವ ವಿಚಾರ ಪ್ರಸ್ತಾಪಿಸಿ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರಿಗೆ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರ ಅವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ಗುಟ್ಟಾಗಿ ದಯಪಾಲಿಸಲಾಗಿದೆ ಎಂದು ಆರೋಪ ಮಾಡಿದೆ.

ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಯತೀಂದ್ರ ವರುಣ ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತೇನೆ. ಕೆಡಿಪಿ, ಆಶ್ರಯ ಸಮಿತಿಗೆ ನೇಮಕವಾಗಿರುವ ಬಗ್ಗೆ ಕೆಲವು ದಿನಗಳ ಹಿಂದೆಯೇ ಆದೇಶವಾಗಿದೆ ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *