ಬೆಂಗಳೂರು: ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ್ದ ಭಾರತ್ ಜೋಡೊ ಯಾತ್ರೆ ಒಂದನೇ ವಾರ್ಷಿಕೋತ್ಸಹ ಅಂಗವಾಗಿ ಎಕ್ಸ್ನಲ್ಲಿ ಪೋಸ್ಟ್ಗಳನ್ನು ಮಾಡಿರುವ ಅವರು ದೇಶ ಉಳಿಸುವ ಕರೆಗೆ ನಾವೆಲ್ಲಾ ಓಗೊಡಬೇಕಾಗಿದೆ ಎಂದು ಹೇಳಿದ್ದಾರೆ.
ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ,ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.
ಇದನ್ನೂ ಓದಿ:‘ರೋಜ್ಗಾರ್ ಮೇಲಾ’ಗಳೂ, ಎಲ್ಪಿಜಿ ದರ ಕಡಿತವೂ
ಈ ಹೋರಾಟಕ್ಕೆ ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಪಂಡಿತ ಜವಾಹರಲಾಲ ನೆಹರೂ, ಮೌಲಾನ ಅಬುಲ್ ಕಲಮ್ ಆಜಾದ್, ವಲ್ಲಭಭಾಯಿ ಪಟೇಲ್, ಶ್ರೀಮತಿ ಇಂದಿರಾಗಾಂಧಿ, ಶ್ರೀ ರಾಜೀವ್ ಗಾಂಧಿ ಸೇರಿದಂತೆ ಹಿರಿಯ ಚೇತನಗಳು ನಡೆಸಿದ ಹೋರಾಟ ಸ್ಪೂರ್ತಿಯಾಗಬೇಕು. ಎಂದು ಬರೆದುಕೊಂಡಿರುವ ಅವರು ಬನ್ನಿ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲತುಂಬೋಣ. ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ. ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ ಎಂದು ಕರೆ ನೀಡಿದ್ದಾರೆ. ಎರಡನೇ ಸ್ವಾತಂತ್ರ್ಯ ಹೋರಾಟ
ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ,ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ.
ಈ… pic.twitter.com/0acZKvuV1G— Siddaramaiah (@siddaramaiah) September 7, 2023