ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಶೇ 30 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಇದಕ್ಕಾಗಿ 500 ಕೋಟಿ ವೆಚ್ಚದಲ್ಲಿ 1,245 ನೂತನ ಬಸ್ಸುಗಳ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಪ್ರಯಾಣಿಕರು ಸಾರ್ವಜನಿಕರ ಸಾರಿಗೆ ಬಳಸುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಲು ಇದು ಮುಖ್ಯಕಾರಣವಾಗಿದೆ. ಹೆಚ್ಚಿದೆ ಬೇಡಿಕೆಯನ್ನು ಪೂರೈಸಲು ಪ್ರಸ್ತುತ ಕಾರ್ಯಾಚರಿಸುತ್ತಿರುವ ಅನುಸೂಚಿಗಳೊಂದಿಗೆ 15 ವರ್ಷ ಮೀರಿದ ಬಸ್ಸುಗಳು ಮತ್ತು ಶಿಥಿಲಾವಸ್ಥೆಯಲ್ಲಿರುವ ಬಸ್ಸುಗಳನ್ನು ಅನುಪಯುಕ್ತಗೊಳಿಸ ಬೇಕಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್,ಕೆಪಾಟೀಲ ಅವರು ಈ ವಿಷಯ ತಿಳಿಸಿದರು.
ಇದನ್ನೂ ಓದಿ:ʼಗ್ಯಾರಂಟಿʼಯಲ್ಲಿ ನೂರು ದಿನ ! ಐದು ವರ್ಷ ಕಳೆದರೂ ಅಚ್ಚರಿಯಿಲ್ಲ!!
ಬಿಎಂಟಿಸಿಗೆ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸುಗಳನ್ನು ನಿವ್ವಳ ವೆಚ್ಚ ಗುತ್ತಿಗೆ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದರು.