ಬೆಂಗಳೂರು: ರಾಜ್ಯದ ಇನ್ನೂ ಹಲವು ತಾಲೂಕುಗಳಲ್ಲಿ ಭೂ ಸಮೀಕ್ಷೆ ನಡೆಯುತ್ತಿದ್ದು, ಸಂಪೂರ್ಣ ವರದಿ ಸಲ್ಲಿಕೆಯಾದ ನಂತರ ಮುಂದಿನ ವಾರದೊಳಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ನಂತರ ಬರಪೀಡಿತ ತಾಲೂಕುಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಹೇಳಿದ್ದಾರೆ.
ಇದನ್ನೂ ಓದಿ:ಬರಗಾಲ ಘೋಷಣೆ ಬಗ್ಗೆ ಸೆ.4 ರಂದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗುರುವಾರ ಸೆ-07 ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಬರ ತಾಲೂಕುಗಳ ಘೋಷಣೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ತಾಲೂಕು ಘೋಷಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಬರ ಘೋಷಣೆಗೆ ವಿಧಿಸಿರುವ ಮಾನದಂಡವನ್ನು ಸಡಿಲಿಸಲು ಪತ್ರ ಬರೆದಿದ್ದಾರೆ. ಸಂಪುಟದಲ್ಲಿ ಬರ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ಸಂಬಂಧ ಬೆಳೆ ಸಮೀಕ್ಷೆ ವರದಿ ಬಂದ ಬಳಿಕ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲು ನಿರ್ಧರಿಸಲಾಗುವುದು ಎಂದು ತಿಳಿಸಿದರು.
2016-17ಕ್ಕಿಂತ ಮೊದಲು ಶೇ 20ರಷ್ಟು ಮಳೆ ಕೊರತೆಯಾದರೆ ಅದನ್ನು ಬರ ಎಂದು ಪರಿಗಣಿಸಲಾಗುತ್ತಿತ್ತು. ಕಾಲಾನಂತರ ಇದನ್ನು ಬದಲಿಸಲಾಯಿತು. ಈಗಿರುವುದು ವೈಜ್ಞಾನಿಕವಲ್ಲದ ಮಾರ್ಗಸೂಚಿಗಳಾಗಿದ್ದು, ಇದನ್ನು ಬದಲಿಸುವಂತೆ ಒತ್ತಾಯಿಸುತ್ತಿದ್ದೇವೆ. ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರುವ ನಿರೀಕ್ಷೆಯಲ್ಲಿದ್ದೇವೆಂದು ಹೇಳಿದರು. ಬರಪೀಡಿತ