ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5 ಸಾವಿರ ಕ್ಯೂಸೆಕ್‌ನಷ್ಟು (ಅರ್ಧ ಟಿಎಂಸಿ ಅಡಿ) ನೀರನ್ನು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯು ಆರ್‌ಸಿ) ಮಂಗಳವಾರ ಶಿಫಾರಸು ಮಾಡಿದೆ.
ಸಮಿತಿ ಅಧ್ಯಕ್ಷ ವಿನೀತ್ ಗುಪ್ತ ಅಧ್ಯಕ್ಷತೆಯಲ್ಲಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು. ಸಮಿತಿಯ ಶಿಫಾರಸಿನಂತೆ ಕರ್ನಾಟಕ ನಡೆದುಕೊಂಡರೆ ಹದಿನೈದು ದಿನಗಳಲ್ಲಿ 7 ಟಿಎಂಸಿ ಅಡಿಯಷ್ಟು ನೀರನ್ನು ತಮಿಳುನಾಡಿಗೆ ಬಿಡಬೇಕಾಗುತ್ತದೆ.
ಇದನ್ನೂ ಓದಿ:ಕಾವೇರಿ ನೀರು ವಿವಾದ: ಕೇಂದ್ರ ಸರ್ಕಾರ ಮಧ್ಯೆವೇಶಿಸಬೇಕು: ಸಿಎಂ ಸಿದ್ದರಾಮಯ್ಯ
ಕಾವೇರಿ ನೀರು ನಿರ್ವಹಣ ಪ್ರಧಿಕಾರದ (ಸಿಡಬ್ಲ್ಯು ಎಂಎ) ಸಭೆ ಬುಧವಾರ ನಿಗದಿಯಾಗಿದ್ದು, ನೀರು ಬಿಡುಗಡೆ ಸಂಬಂಧ ಪ್ರಾಧಿಕಾರ ಅಂತಿಮ ಆದೇಶ ಹೊರಡಿಸಲಿದೆ.