ಬೆಂಗಳೂರು: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ವದ BJP ಸರ್ಕಾರ ಜಾರಿಗೆ ತಂದಿರುವ ರೈತ, ಕಾರ್ಮಿಕ, ದಲಿತ, ಮಹಿಳಾ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶಾಧ್ಯಂತ ನವೆಂಬರ್ 26, 27, 28 ರಂದು 3 ದಿನಗಳು 72 ಗಂಟೆಗಳ ಕಾಲ ರಾಜ್ಯ ರಾಜಧಾನಿಯಲ್ಲಿ ರಾಜಭವನದ ಮುಂದೆ ಬೃಹತ್ ಮಹಾ ಪಡಾವ್ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು, ಇದನ್ನು ಕರ್ನಾಟಕದಲ್ಲಿ ಯಶಸ್ವಿಗೊಳಿಸಲು ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಒಕ್ಕೂರಲು ನಿರ್ಣಯವನ್ನು ಕೈಗೊಳ್ಳಲಾಯಿತು.ಕಾರ್ಮಿಕ
ಇದನ್ನೂ ಓದಿ:ರೈತರ ಭೂಮಿ ಕಿತ್ತು ರಿಯಲ್ ಎಸ್ಟೇಟ್ ದಂಧೆ!: ನೈಸ್ ಸಂಸ್ಥೆ ವಿರುದ್ಧ ಬೃಹತ್ ಪ್ರತಿಭಟನೆಗೆ ಸಜ್ಜು
ಒಂದೆಡೆ ಭಾರತದ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿ ಅಧಿಕಾರವನ್ನು ನಡೆಸುತ್ತಿರುವ ಈ ಸರ್ಕಾರದ ನೀತಿಗಳನ್ನು ಬದಲಾಯಿಸಿ ಸಂವಿಧಾನವನ್ನು ರಕ್ಷಿಸುವ ಮೂಲಕ ದೇಶದ ಜನತೆಯನ್ನು ರಕ್ಷಣೆ ಮಾಡಬೇಕಿದೆ. ಅದಕ್ಕಾಗಿ ನವೆಂಬರ್ 26 ರ ಸಂವಿಧಾನ ದಿನವನ್ನು ನಿಗದಿ ಮಾಡಲಾಗಿದೆ. ಈ ಮಹಾಪಡಾವ್ ಹೋರಾಟವನ್ನು ಯಶಸ್ವಿಗೊಳಿಸಲು ಅಕ್ಟೋಬರ್ 9 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ನಡೆಸಲು ನಿರ್ಧರಿಸಲಾಯಿತು.
ದುಂಡು ಮೇಜಿನ ಸಭೆಯಲ್ಲಿ ಬಡಗಲಪುರ ನಾಗೇಂದ್ರ, ಜಿ.ಸಿ.ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಎಸ್.ವರಲಕ್ಷ್ಮಿ, ಕೆ.ವಿ.ಭಟ್, ದೇವಿ, ಪುಟ್ಟಮಾದು, ನೂರ್ ಶ್ರೀಧರ್, ಟಿ.ಯಶವಂತ್, ದಿವಾಕರ್, ಸಿದ್ದನಗೌಡ ಪಾಟೀಲ್, ಮಾನಸಯ್ಯ, ದು.ಸರಸ್ವತಿ ಮುಂತಾದವರು ಭಾಗವಹಿಸಿದ್ದರು, ಸಭೆಯ ಅಧ್ಯಕ್ಷತೆಯನ್ನು ಎಚ್.ಆರ್.ಬಸವರಾಜಪ್ಪ ಭಾಗವಹಿಸಿದ್ದರು.
ವಿಡಿಯೋ ನೋಡಿ:“ಪರ್ಯಾಯ ಕೃಷಿ ಧೋರಣೆಗಳು” ರಾಷ್ಟ್ರೀಯ ವಿಚಾರ ಸಂಕಿರಣ