ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್​ಡಿ ಕುಮಾರಸ್ವಾಮಿ

ದೇವನಹಳ್ಳಿ: ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ ಬಂದ್​ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಕಾವೇರಿ ನೀರು ಹಂಚಿಕೆ:ಇಂದು ಮಂಡ್ಯ ಮದ್ದೂರು ಬಂದ್‌

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದರು. ನಿನ್ನೆ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.

ಮೈತ್ರಿ ಮಾತುಕತೆ ಮುಗಿಸಿ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿದರು. ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿರುವ ತಂದೆ ಮಗನನ್ನು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುನಿರತ್ನ ಸ್ವಾಗತಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಅಮಿತ್ ಶಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದರು.

ವಿಡಿಯೋ ನೋಡಿ:ಪರ್ಯಾಯ ಕೃಷಿ ಧೋರಣೆಗಳು:ಭೂಮಿ ಹಕ್ಕು ನಿಜವಾದ ಸ್ವಾತಂತ್ರ್ಯ – ಯು. ಬಸವರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *