‘ನ್ಯೂಸ್ ಕ್ಲಿಕ್’ ಕಚೇರಿಯನ್ನು ಜಪ್ತಿ ಮಾಡಿದ ದೆಹಲಿ ಪೊಲೀಸರು : ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡನೆ

‘ನ್ಯೂಸ್‌ ಕ್ಲಿಕ್’ಸಂಸ್ಥೆಯ ವಿರುದ್ಧ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದ್ದು,  ಶೋಧ ಕಾರ್ಯಾಚರಣೆಯ ಬಳಿಕ ‘ನ್ಯೂಸ್ ಕ್ಲಿಕ್’ ಕಚೇರಿಯನ್ನು ಜಪ್ತಿ ಮಾಡಿದ್ದಾರೆ.

ಆಗಸ್ಟ್‌ನಲ್ಲಿ, ನ್ಯೂಯಾರ್ಕ್ ಟೈಮ್ಸ್ ದೈನಿಕದಲ್ಲಿ ಮಿಲಿಯನೇರ್ ನೆವಿಲ್ಲ್  ರಾಯ್ ಸಿಂಘಮ್‌ ಎಂಬ ಅಮೆರಿಕನ್ ಶ್ರೀಮಂತ ವ್ಯಕ್ತಿಯ ಮೂಲಕ ಚೀನೀ ಪ್ರಚಾರವನ್ನು ನಡೆಸಲು, ಭಾರತ-ವಿರೋಧಿ ವಾತಾವರಣವನ್ನು ಸೃಷ್ಟಿಸಲು  ನ್ಯೂಸ್‍ಕ್ಲಿಕ್‍ ಮತ್ತು ಕಾಂಗ್ರೆಸ್‍ ಮುಖಂಡರು  ಹಣ  ಪಡೆದಿದ್ದಾರೆ ಎಂಬ ಸುದ್ದಿಯನ್ನು ಆಧರಿಸಿ ಬಿಜೆಪಿ ಸಂಸದ ನಿಶಿಕಾಂತ್‍ ದುಬೆ ಲೋಕಸಭೆಯಲ್ಲಿ  ಆರೋಪಿಸಿದ್ದರ ಹಿನ್ನೆಲೆಯಲ್ಲಿ ದಿಲ್ಲಿ ಪೋಲೀಸ್‍ ವಿಶೇಷ ದಳ ಈ ಕಾರ್ಯಾಚರಣೆ ನಡೆಸಿದೆ ಎಂದು ಹೇಳಲಾಗಿದೆ. ಆಗಸ್ಟ್ 17 ರಂದು ದಿಲ್ಲಿ ಪೋಲಿಸ್ ಕರಾಳ ಯುಎಪಿಎ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ನ್ಯೂಸ್ ಕ್ಲಿಕ್

ನ್ಯೂಸ್‌ಕ್ಲಿಕ್‌ನ ಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಪತ್ರಕರ್ತರಾದ ಊರ್ಮಿಲೇಶ್, ಔನಿಂದ್ಯೋ ಚಕ್ರವರ್ತಿ, ಅಭಿಸಾರ್ ಶರ್ಮಾ, ಪರಂಜಯ್ ಗುಹಾ ಠಾಕುರ್ತಾ ಮತ್ತು ಇತಿಹಾಸಕಾರ ಸೊಹೈಲ್ ಹಶ್ಮಿ ಅವರನ್ನು ಕೂಡ ವಿಚಾರಣೆ ನಡೆಸಿದ್ದು, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

ಇದನ್ನೂ ಓದಿ : ಸ್ವತಂತ್ರ ಸುದ್ದಿ ಮಾಧ್ಯಮ ನ್ಯೂಸ್‌ ಕ್ಲಿಕ್ ವಿರುದ್ಧ ‘ಯುಎಪಿಎ’ ದಾಖಲು; 2 ಪತ್ರಕರ್ತರು ವಶಕ್ಕೆ!

ಖಂಡನೆ : ನ್ಯೂಸ್‍ಕ್ಲಿಕ್‍ಗೆ ಸಂಬಂಧಿಸಿದ ಪತ್ರಕರ್ತರು ಮತ್ತು ಬರಹಗಾರರ ಮನೆಗಳ ಮೇಲೆ ನಡೆಸಿದ ಬಹು ದಾಳಿಗಳ ಬಗ್ಗೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಕಳವಳ ವ್ಯಕ್ತಪಡಿಸಿದೆ. ದೆಹಲಿ ಪೊಲೀಸರ ಕ್ರಮಗಳ ಕುರಿತು ಶೀಘ್ರದಲ್ಲೇ ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುವುದಾಗಿ ಮತ್ತು ಹೆಚ್ಚಿನ ಮಾಹಿತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವಾಗ ಪತ್ರಕರ್ತರೊಂದಿಗೆ ತನ್ನ ಒಗ್ಗಟ್ಟನ್ನು ಒತ್ತಿ ಹೇಳುತ್ತದೆ ಎಂದು ಅದು ಗಮನಿಸಿದೆ. ನಾವು ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ ಮತ್ತು ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡುತ್ತೇವೆ. ಪಿಸಿಐ ಪತ್ರಕರ್ತರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ವಿವರಗಳೊಂದಿಗೆ ಹೊರಬರಲು ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಪ್ರೆಸ್ ಕ್ಲಬ್ ಟ್ವೀಟ್ ಮಾಡಿದೆ. ನ್ಯೂಸ್ ಕ್ಲಿಕ್

ವಿಡಿಯೋ ನೋಡಿ:ಹೋರಾಟದ ಹಕ್ಕಿಗಾಗಿ ಆಂದೋಲನ – ಪ್ರತಿಭಟನೆಕಾರರ ಬಂಧನ Janashakthi Media

Donate Janashakthi Media

Leave a Reply

Your email address will not be published. Required fields are marked *