ಮೈಸೂರು: ಜಾತಿ ಗಣತಿ ಆಯೋಗವು ಸರ್ಕಾರಕ್ಕೆ ನವೆಂಬರ್ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದ್ದು, ಅದನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮ್ಯ ಶನಿವಾರ ತಿಳಿಸಿದರು. ಜಿಲ್ಲೆಯ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಹಿಂದಿನ ಕಾಂತರಾಜು ಆಯೋಗವು ನೀಡಿದ್ದ ವರದಿಯನ್ನು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕೆ ಕುಮಾರಸ್ವಾಮಿ ಸ್ವೀಕರಿಸಲಿಲ್ಲ. ಈಗ ಆಯೋಗಕ್ಕೆ ಹೊಸ ಅಧ್ಯಕ್ಷರು ಇದ್ದಾರೆ. ಕಾಂತರಾಜು ಆಯೋಗದಂತೆಯೇ ವರದಿ ಸಲ್ಲಿಸಲು ಹೇಳಿದ್ದೇನೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು ಭಾರತಕ್ಕೆ ಸ್ವಾಂತತ್ರ್ಯ ಸಿಕ್ಕಿ 76 ವರ್ಷಗಳಾದರೂ ಹಿಂದೂಳಿದ ವರ್ಗದವರು ಆರ್ಥಿಕವಾಗಿ, ಸಾಮಾಜಿವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿದುಕೊಳ್ಳುವುದಕ್ಕೆ ಹಾಗೂ ಸಮಸಮಾಜ ನಿರ್ಮಾಣವಾಗ ಬೇಕಾದರೆ ಜಾತಿ ಗಣತಿ ಮುಖ್ಯ ಎಂದು ಹೇಳಿದರು. ಹಾಗೂ ಸರ್ಕಾರದ ಯೋಜನೆಗಳನ್ನು ಎಲ್ಲ ವರ್ಗಗಳ ಜನರಿಗೆ ತಲುಪಿಸಲು ಜಾತಿ ಮತ್ತು ಸಾಮಾಜಿಕ ಗಣತಿ, ಅದರ ಅಂಕಿಅಂಶಗಳು ಅಗತ್ಯ ಎಂದರು
ಇದನ್ನೂ ಓದಿ: 4860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ| ಸಿಎಂ ಸಿದ್ದರಾಮಯ್ಯ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಪ್ರಧಾನಿ ಜಾತಿಗಣತಿಯನ್ನು ವಿರೋಧಿಸುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಮುಸ್ಲಿಂರಿಗೆ ಒಂದು ಸೀಟು ಕೊಡದೆ ಇವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವುದರಲ್ಲಿ ಅರ್ಥವಿಲ್ಲ, ನಾವು ಏನು ಹೇಳುತ್ತೇವೋ ಅದು ಸರಿಯಾಗಿರಬೇಕು, ವಸ್ತುಸ್ಥಿತಿ ಬೇರೆ ಹೇಳಿಕೆ ಬೇರೆ ಇರಬಾರದು ಸತ್ಯವನ್ನು ಹೇಳಬೇಕು ಎಂದರು.
ಹಿಂದಿನ ಕಾಂತರಾಜು ಆಯೋಗವು ನೀಡಿದ್ದ ವರದಿಯನ್ನು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕೆ ಕುಮಾರಸ್ವಾಮಿ ಸ್ವೀಕರಿಸಲಿಲ್ಲ. ಈಗ ಆಯೋಗಕ್ಕೆ ಹೊಸ ಅಧ್ಯಕ್ಷರು ಬಂದಿದ್ದಾರೆ. ಕಾಂತರಾಜು ಆಯೋಗದಂತೆಯೇ ವರದಿ ಸಲ್ಲಿಸಲು ಕೇಳಿದ್ದೇನೆ. ಅವರು ವರದಿ ಸಲ್ಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳತ್ತೇವೆ ಎಂದು ಹೇಳಿದರು.
ವಿಡಿಯೋ ನೋಡಿ: ಚುನಾಯಿತ ಸರ್ವಾಧಿಕಾರ ಪ್ರಭುತ್ವದಿಂದ ” ನ್ಯೂಸ್ ಕ್ಲಿಕ್ ಮೇಲೆ ದಾಳಿ”, ಅಪಾಯದಲ್ಲಿರುವ ಭಾರತದ ಪ್ರಜಾಪ್ರಭುತ್ವ