ಹಾವೇರಿ: ರಾಜ್ಯವ್ಯಾಪಿ ಎಪಿಎಂಸಿ, ವೇರ್ ಹೌಸ್, ಮಿಲ್ ಗೋಡೌನ್, ಗೂಡಶೆಡ್, ಬಜಾರ್ ಸೇರಿದಂತೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಹಮಾಲಿ ಕಾರ್ಮಿಕರಿಗೆ ರಾಜ್ಯ ಸರಕಾರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಗುರುವಾರ ಹಮಾಲಿ ಕಾರ್ಮಿಕ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಸರಕಾರವನ್ನು ಆಗ್ರಹಿಸಿದ್ದಾರೆ. ಹಮಾಲಿ ಕಾರ್ಮಿಕರಿಗೆ
ನಗರದ ಎಪಿಎಂಸಿ ಆವರಣದಲ್ಲಿ ಅ-29 ರಂದು ಸವದತ್ತಿಯಲ್ಲಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ನೇತೃತ್ವದಲ್ಲಿ ನಡೆಯಲಿರುವ ಎಪಿಎಂಸಿ ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರಯ ರೈತರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರ ವಿರೋಧಿಯಾಗಿದ್ದ ಈ ಹಿಂದಿನ ಬಿಜೆಪಿ ಸರಕಾರ ಜಾರಿ ಮಾಡಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯ ಜಾರಿಯಿಂದಾಗಿ ಒಂದು ಲಕ್ಷದಷ್ಟು ಹಮಾಲಿ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದರು. ಕೃಷಿ ಉತ್ಪನ್ನಗಳ ಅವಕ, ಆದಾಯವಿಲ್ಲದೆ ಎಪಿಎಂಸಿಗಳು ಬಂದ್ ಆಗುವ ಪರಸ್ಥಿತಿ ನಿರ್ಮಾಣವಾಗಿತ್ತು. ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪ್ರಸ್ತುತ ಈ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿದ್ದು ಸ್ವಾಗತಾರ್ಹವಾಗಿದೆ ಎಂದರು. ಹಮಾಲಿ ಕಾರ್ಮಿಕರಿಗೆ
ಪ್ರಸ್ತುತ ರಾಜ್ಯ ಬಜೆಟ್ನಲ್ಲಿ ಎಪಿಎಂಸಿಯ ಕಾಯಕ ನಿಧಿಯಡಿ ಶವ ಸಂಸ್ಕಾರಕ್ಕೆ ನೀಡುವ ಸಹಾಯಧನವನ್ನು 25 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿದ್ದಕ್ಕಾಗಿ ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:‘ನನ್ನ ತಂಗಿಯನ್ನು ಕೊಂದಿದ್ದಾರೆ’ | ನ್ಯಾಯಕ್ಕಾಗಿ ಸಿಎಂ ಆದಿತ್ಯನಾಥ್ ಮುಂದೆ ದಯನೀಯವಾಗಿ ಮೊರೆ ಇಟ್ಟ ಮಹಿಳೆ
ರಾಜ್ಯದ ಮಾರುಕಟ್ಟೆಗಳಲ್ಲಿ ಹಮಾಲಿ ಕಾರ್ಮಿಕರ ಉದ್ಯೋಗದ ಪರಿಸ್ಥಿತಿ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ಜಾರಿಯಾಗುತ್ತಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಇನ್ನಷ್ಟು ಬಲಪಡಿಸುವುದು, ನೆನಗುದಿಗೆ ಬಿದ್ದಿರುವ ನಿವೃತ್ತಿ ಪರಿಹಾರ, ವಸತಿ, ಕನಿಷ್ಟ ವೇತನ ಜಾರಿ ಮುಂತಾದ ಹಕ್ಕೊತ್ತಾಯಗಳು, ಸಂಘಟನಾ ಜಾಗೃತಿ ಮುಂತಾದ ವಿಷಯಗಳ ಬಗ್ಗೆ ಈ ಸಮಾವೇಶವು ಚರ್ಚೆ ನಡೆಸಲಿದ್ದು ಮುಂದಿನ ಹೋರಾಟ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದರು. ಹಮಾಲಿ ಕಾರ್ಮಿಕರಿಗೆ
ರಾಜ್ಯ ಜಂಟಿ ಕಾರ್ಯದರ್ಶಿ ಗುರುಸಿದ್ದಪ್ಪ ಅಂಬಿಗೇರ ಮಾತನಾಡಿ, ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ (ಸಿಐಟಿಯು) ಸಂಘಟಿಸಿರುವ ಈ ಸಮಾವೇಶವನ್ನು ಎಪಿಎಂಸಿ ಮಾರುಕಟ್ಟೆ ಹಾಗೂ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಸವದತ್ತಿ ಎಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ, ಕೃಷಿ ಮಾರಾಟ ಇಲಾಖೆ ನಿರ್ದೇಶಕರಾದ ಜಿ.ಎಂ. ಗಂಗಾಧರಸ್ವಾಮಿ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಚಂದ್ರಕಾಂತ ಪಾಟೀಲ, ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ್ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯಾಧ್ಯಕ್ಷ ಕೆ. ಮಹಾಂತೇಶ ಅಧ್ಯಕ್ಷತೆ ವಹಿಸಲಿದ್ದು. ರಾಜ್ಯದ ಎಲ್ಲ ಜಿಲ್ಲೆಗಳಿಂದ ಹಮಾಲಿ ಕಾರ್ಮಿಕರು ಪಾಲ್ಗೊಳ್ಳುವ ಈ ಮಹತ್ವದ ಎಪಿಎಂಸಿ ಹಮಾಲಿ ಕಾರ್ಮಿಕರ ರಾಜ್ಯ ಮಟ್ಟದ 3ನೇ ಸಮಾವೇಶದಲ್ಲಿ ಹಾವೇರಿ ಜಿಲ್ಲೆಯ ಎಪಿಎಂಸಿ ಹಮಾಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕಾರ್ಮಿಕರನ್ನು ವಿನಂತಿಸಿದರು.
ಈ ಸಭೆಯಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಹಮಾಲಿ ಕಾರ್ಮಿಕ ಮುಖಂಡರಾದ ಕರಿಯಪ್ಪ ಲಿಂಗದಳ್ಳಿ, ಗುಡ್ಡಪ್ಪ ಮಾಳಗಿ, ಹನಮಂತಪ್ಪ ಕನಕಾಪುರ, ರಾಜು ಮಾಳಮ್ಮನವರ ಸೇರಿದಂತೆ ಹಮಾಲಿ ಕಾರ್ಮಿಕರು ಉಪಸ್ಥಿತರಿದ್ದರು.
ವಿಡಿಯೋ ನೋಡಿ:“ಇಸ್ರೇಲ್ ಪ್ಯಾಲಿಸ್ಟೈನ್ ಯುದ್ಧ”ದ ಹಿನ್ನೆಲೆ ಏನು? Janashakthi Media