ಬೆಂಗಳೂರು: 64 ವರ್ಷಗಳ ಹಿಂದೆ ಇದೇ ದಿನದಂದು ಅಕ್ಟೋಬರ್ 21, 1959 ಚೀನಾದೊಂದಿಗಿನ ಭಾರತದ ಗಡಿಭಾಗದಲ್ಲಿ ಕರ್ತವ್ಯನಿರತರಾಗಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ 10 ಪೊಲೀಸರು ಚೀನಾದ ಸೇನೆ ನಡೆಸಿದ ದಾಳಿಗೆ ಬಲಿಯಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸಂಸ್ಮರಣಾ ದಿನವನ್ನು ದೇಶದಾದ್ಯಾಂತ ಆಚರಿಸಲಾಗುತ್ತದೆ. ಪೊಲೀಸರಿಗೆ
ಬೆಂಗಳೂರಿನ ಮೈಸೂರ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಪೊಲೀಸ್ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತುಗೃಹಸಚಿವ ಜಿ ಪರಮೇಶ್ವರ್ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿದರು.
ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದ ಅವರು, ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದರು.
ಇದನ್ನೂ ಓದಿ:ಸರಕಾರದ ನಿರ್ಲಕ್ಷ್ಯ : ವಿಧಾನಸೌಧದತ್ತ ಹೊರಟ ಬಿಸಿಯೂಟ ನೌಕರರ ಮೇಲೆ ಪೊಲೀಸ್ ದೌರ್ಜನ್ಯ