ಬೆಂಗಳೂರು: ರಾಜ್ಯದ 15 ತಿಂಗಳ ಪ್ರಾಯದ ಮೌರ್ಯ ಎಂಬ ಮಗು ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಆ ಮಗುವಿನ ಚಿಕಿತ್ಸೆಗಾಗಿ ವಿದೇಶದಿಂದ ತರಿಸುವ ಇಂಜೆಕ್ಷನ್‌ಗೆ ಆಮದು ಸುಂಕ ವಿನಾಯಿತಿ ನೀಡಿ, ಪುಟ್ಟ ಕಂದನ ಪ್ರಾಣ ಉಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಉಚಿತ ವೈದ್ಯಕೀಯ ಚಿಕಿತ್ಸೆ | ಕೇರಳಕ್ಕೆ ಅಗ್ರ ಸ್ಥಾನ – ಕೇಂದ್ರ ಸರ್ಕಾರದಿಂದ ಪ್ರಶಸ್ತಿ
ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಕಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.
ಝೋಲ್ಗೆನ್‌ಸ್ಮ ಚುಚ್ಚುಮದ್ದಿಗೆ ಆಮದು ಸುಂಕ ವಿನಾಯಿತಿ ನೀಡಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಹಾಗೂ ಪಿಎಂ ಕೇರ್ಸ್ ನಿಧಿಯಲ್ಲಿ ಮಗುವಿನ ಚಿಕಿತ್ಸೆಗೆ ನೆರವು ನೀಡಬೇಕು ಎಂದು ಸಿಎಂ ಕೋರಿದ್ದಾರೆ.
ವಿಡಿಯೋ ನೋಡಿ:ಸತ್ತವರಿಗೆ ಚಿಕಿತ್ಸೆ, ಶಸ್ತ್ರಚಿಕಿತ್ಸೆಗೆ ಮುನ್ನ ಡಿಸ್ಚಾರ್ಜ್ ಇದು ಆಯುಷ್ಮಾನ್ ಭಾರತ್ ಕಥೆ ವ್ಯಥೆ