ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆಯ್ಕೆ

ನವದೆಹಲಿ: ಕರ್ನಾಟಕ  ಬಿಜೆಪಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷವೂ ನೇಮಕ ಮಾಡಿದೆ. ಅವರು 2019 ರಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥರಾಗಿ ನೇಮಕಗೊಂಡ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸುವ ಮೂಲಕ ಹತ್ತನೇ ಬಿಜೆಪಿ ರಾಜ್ಯ ಮುಖ್ಯಸ್ಥರಾಗಲಿದ್ದಾರೆ. “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ನೇಮಕ ಮಾಡಿದ್ದಾರೆ. ಈ ನೇಮಕಾತಿ ತಕ್ಷಣವೇ ಜಾರಿಗೆ ಬರಲಿದೆ” ಎಂದು ಬಿಜೆಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಶಾಸಕರಾಗಿ ಗೆದ್ದಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಜನಾದೇಶವನ್ನು ಕಳೆದುಕೊಂಡಿರುವ ಬಿಜೆಪಿ, ರಾಜ್ಯ ವಿಧಾನಸಭೆಗೆ ಇನ್ನೂ ವಿರೋಧ ಪಕ್ಷದ ನಾಯಕನನ್ನು ಘೋಷಿಸಿಲ್ಲ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆಯೆ? ದುಬೈಯಲ್ಲಿ ತಂತ್ರ ನಡೆಯುತ್ತಿದೆಯೆ?

ಚುನಾವಣಾ ರಾಜಕೀಯ ತೊರೆದಿದ್ದ ಬಿ.ಎಸ್. ಯಡಿಯೂರಪ್ಪ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ  ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡಲು ರಾಜ್ಯಾದ್ಯಂತ ವ್ಯಾಪಕ ಪ್ರಚಾರ ಮಾಡಿದ್ದರು. ಅಲ್ಲದೆ ತಮ್ಮ ಪುತ್ರನ ಪರ ಶಿಕಾರಿಪುರದಾದ್ಯಂತ ಪ್ರಚಾರ ನಡೆಸಿದ್ದ ಅವರು ಬಿ.ವೈ.ವಿಜಯೇಂದ್ರ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಲು ತಮ್ಮ ಕ್ಷೇತ್ರದ ಮತದಾರರಿಗೆ ಸಹಕರಿಸುವಂತೆ ಮನವಿ ಮಾಡಿದ್ದರು.

ಈ ನಡುವೆ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಹಿರಿಯ ನಾಯಕರ ನಡುವೆ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಪೈಪೋಟಿಯಲ್ಲಿ ಹಿರಿಯ ನಾಯಕರಾದ ಶೋಬಾ ಕರಂದ್ಲಾಜೆ, ಸಿ.ಟಿ.ರವಿ ಮತ್ತು ವಿ.ಸುನೀಲ್ ಕುಮಾರ್ ಅವರು ಇದ್ದರು. ಅದಾಗ್ಯೂ, ಪಕ್ಷವು ಮೊದಲ ಬಾರಿಗೆ ಶಾಸಕರಾದ ರಾಜ್ಯದ ಹಲವಾರು ಬಿಜೆಪಿ ನಾಯಕರಿಗಿಂತ ಕಿರಿಯವರಾದ ಬಿವೈವಿ ಅವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದೆ.

ವಿಡಿಯೊ ನೋಡಿ: ದುಡಿಯುವ ಜನರ ಮಹಾಧರಣಿ ನವೆಂಬರ್ 26 ರಿಂದ 28 Janashakthi Media

Donate Janashakthi Media

Leave a Reply

Your email address will not be published. Required fields are marked *