ಮಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿದ್ದು ಈ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕುಸ್ತಿ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರನ್ನು ಇಂತಹ ಕಾರ್ಯಕ್ರಮಕ್ಕೆ ಅತಿಥಿಯಾಗಿ ಕರೆದಿರುವುದು ಎಷ್ಟು ಸರಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿದ್ದವು. ಸದ್ಯ ಈಗ ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಬ್ರಿಜ್ ಭೂಷಣ್ ಪತ್ರ ಬರೆದು ತಿಳಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಕಂಬಳ ಕಾರ್ಯಕ್ರಮದ ಅತಿಥಿ!
ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಭಾರತದ ಕುಸ್ತಿ ಫೆಡರೇಷನ್ ಮಾಜಿ ಆಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಅತಿಥಿಯಾಗಿ ಆಹ್ವಾನ ನೀಡಲು ಕುಸ್ತಿ ಅಸೋಸಿಯೇಷನ್ ಹಾಗೂ ಸಿದ್ದಿ ಜನಾಂಗ ಮನವಿ ಮಾಡಿತ್ತು. ಮನವಿ ಮೇರೆಗೆ ಕಂಬಳ ಸಮಿತಿ ಆಹ್ವಾನ ನೀಡಿತ್ತು. ಈ ಸಂಬಂಧ ವಿರೋಧ ಹಿನ್ನಲೆ ಬ್ರಿಜ್ ಭೂಷಣ್ ಅವರಿಗೆ ಕರೆ ಮಾಡಿ ಕಂಬಳ ಸಮಿತಿ ವಿವರ ನೀಡಿದ್ದು ತಾವು ಕಂಬಳಕ್ಕೆ ಅತಿಥಿಯಾಗಿ ಬರಲ್ಲ ಎಂದು ಪತ್ರ ಬರೆದು ಬ್ರಿಜ್ ಭೂಷಣ್ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ಕಂಬಳ ಸಮಿತಿ ಮುಖ್ಯಸ್ಥ ಅಶೋಕ್ ರೈ ಮಾಹಿತಿ ನೀಡಿದ್ದು , ವಿರೋಧ ವ್ಯಕ್ತವಾದ ಹಿನ್ನಲೆ ಬ್ರಿಜ್ ಅವರ ಆಹ್ವಾನ ರದ್ದುಗೊಳಿಸಿದ್ದು, ಈಗ ನಾವು ಆಹ್ವಾನ ಪತ್ರಿಕೆಯನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ.
ವಿಡಿಯೋ ನೋಡಿ: ಸಂವಿಧಾನ ಮಾರ್ಗವೇ ನಮಗೆ ಸರಿಯಾದ ದಾರಿ – ಜಸ್ಟೀಸ್ ಎಚ್ ಎನ್ ನಾಗಮೋಹನದಾಸ್ Janashakthi Media