ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ ಸತ್ಯಹರಿಶ್ಚಂದ್ರರಾಗಿದ್ದರೆ ಸಿಬಿಐ ತನಿಖೆಯ ಬಗ್ಗೆ ಭಯ ಏಕೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್, ಅಶೋಕ್ ಪ್ರಶ್ನಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಕುರಿತು ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಿದ್ದರಾಮಯ್ಯನವರು ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ @siddaramaiahನವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ @DKShivakumar ಅವರನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಜವಾಗಿಯೂ…
— R. Ashoka (ಆರ್. ಅಶೋಕ) (@RAshokaBJP) November 25, 2023
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಕುರಿತು ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಕ್ಷಣೆಗೆ ನೀಡಲು ಯತ್ನಿಸುತ್ತಿದೆ ಎಂದು ವಿರೋದ ಪಕ್ಷಗಳೂ ಮುಗಿಬಿದ್ದಿವೆ.
ಇದನ್ನೂ ಓದಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿಲೀನ ವಿರೋಧಿಸಿ ಪ್ರತಿಭಟನೆ
ಡಿ.ಕೆ ಶಿವಕುಮಾರ್ ಮೇಲೆ ಸಿಬಿಐ ತನಿಖೆಗೆ 2019ರ ಸೆಪ್ಟೆಂಬರ್ 25ರಂದು ನೀಡಿದ್ದ ಅನುಮತಿಯನ್ನು ಹಿಂಪಡೆಯಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರ್ಕಾರದ ನಡೆಯನ್ನು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರವಾಗಿ ವಿರೋಧಿಸಿವೆ.
ವಿಡಿಯೋ ನೋಡಿ:ನೇಜಾರು ಹತ್ಯೆ ಪ್ರಕರಣ :ಕೊಲೆಗಾರನ ಹಿನ್ನೆಲೆ ತನಿಖೆಯಾಗಲಿ, ಕೋಮುವಾದದ ವಾಸನೆಯೂ ಬಡಿಯುತ್ತಿದೆ Nejaru murder case