ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡ ಜನಸ್ಪಂದನಾ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾವಿರಾರು ಮಂದಿ ತಮ್ಮ ಅಹವಾಲು ಸಲ್ಲಿಸಲು ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ ಸಿಎಂ ಸಿದ್ದರಾಮಯ್ಯ ಜನತಾ ದರ್ಶನದ ಸ್ಥಳದಲ್ಲೇ 1 ಲಕ್ಷ ಪರಿಹಾರ ಮಂಜೂರು ಮಾಡಿದರು. ಜನಸ್ಪಂದನಾ
ಇದೇ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮೂರ್ತಿ ಎಂಬುವವರಿಗೆ ಸಿಎಂ ಪರಿಹಾರ ನಿಧಿಯಿಂದ 30,000 ಪರಿಹಾರ ನೀಡಿದರು.
ಹುಣಸೂರಿನ ಕಲ್ಲಹಳ್ಳಿ ಪಂಚಾಯ್ತಿಯ ಲಕ್ಷ್ಮೀಬಾಯಿ ಎನ್ನುವವರು ಅಲೆಮಾರಿ ಡೋಂಗ್ರಿ ಗೆರೆಸಿಯಾ ಸಮುದಾಯದವರಿಗೆ 40 ಮನೆಗಳು ಮಂಜೂರಾಗಿವೆ. ಇವರಿಗೆ ಮನೆ ಕಟ್ಟಲು ಮಂಜೂರಾತಿ ನೀಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಿಎಂ ಅಲೆಮಾರಿ ಅಭಿವೃದ್ಧಿ ನಿಗಮದ ಎಂಡಿ ಅವರನ್ನು ಕರೆದು, ಅರ್ಜಿಯನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಕ್ರಮ ವಹಿಸಿ ತಮಗೆ ವರದಿ ನೀಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಭ್ರೂಣ ಹತ್ಯೆ ಮಾಡಿದ್ರೆ ಕಠಿಣ ಶಿಕ್ಷೆ| ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು BBMP ಗೆ ಹೋದರೆ ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆಎಂದು ವೃದ್ದೆಯೊಬ್ಬರ ದೂರಿಗೆ ಗರಂ ಆದ ಮುಖ್ಯಮಂತ್ರಿಗಳು ಬಿಬಿಎಂಪಿ ಅಧಿಕಾರಿಯನ್ನು ಕರೆದು ಈ ಪ್ರಕರಣವನ್ನು ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ರಿಪೋರ್ಟ್ ಮಾಡಿ ಎಂದು ಸೂಚಿಸಿದರು.
148 ಮಂದಿ ವಿಶೇಷ ಚೇತನರಿಂದ ಮೂರು ಚಕ್ರ ವಾಹನಕ್ಕೆ ಸಿಡಾಕ್ ಸಂಸ್ಥೆಯಿಂದ ತರಬೇತಿ ಪಡೆದಿದ್ದರೂ ಎರಡು ವರ್ಷದಿಂದ ನೆರವು ನೀಡಿಲ್ಲ ಎನ್ನುವ ದೂರು ಬಂತು. ತರಬೇತಿ ಪಡೆದಿರುವ 98 ಮಂದಿಗೆ ಮುಂದಿನ 15 ದಿನಗಳ ಒಳಗೆ ಸಾಲ ಸೌಲಭ್ಯ ಒದಗಿಸಬೇಕು. ಉಳಿದವರಿಗೆ ತ್ರಿಚಕ್ರ ವಾಹನ ಕೊಡುಸಲಯ ತಕ್ಷಣ ಕ್ರಮ ಕೈಗೊಳ್ಳಬೇಕು ಎನ್ನುವ ಖಡಕ್ ಸೂಚನೆಯನ್ನು ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ನೀಡಿದರು.
ವಿಡಿಯೋ ನೋಡಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ?) ಬಹಿರಂಗ ಚರ್ಚೆಗೆ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರ ವಿರೋಧ ಯಾಕೆ?