ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ : ಮಿಜೋರಾಂ ಸೋಮುವಾರಕ್ಕೆ

ದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ (ಡಿಸೆಂಬರ್ 3, ಭಾನುವಾರ) ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಮಿಜೋರಾಂನಲ್ಲಿ ಮಾತ್ರ ಸೋಮವಾರ ಮತ ಎಣಿಕೆ ನಡೆಯಲಿದೆ.

ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳ ಎದೆಬಡಿತ ಜೋರಾಗಿದೆ. ಮತದಾನ ನಡೆದೆ ದಿನದಿಂದ ಹಿಡಿದು ಈವರೆಗೆ ಇವಿಎಂಗಳನ್ನು ಇಟ್ಟಿರುವ ಸ್ಟ್ರಾಂಗ್‌ ರೂಂಗಳಿಗೆ ಬಿಗಿ ಭದ್ರತೆಯನ್ನು ಒದಸಲಾಗಿದೆ. ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಗುತ್ತದೆ. ಮಧ್ಯಾಹ್ನದ ವೇಳೆಗೆ ನಾಲ್ಕೂ ರಾಜ್ಯಗಳ ಫಲಿತಾಂಶದ ಸಂಪೂರ್ಣ ಚಿತ್ರಣ ಸಿಗಲಿದೆ.

ಐದುರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಪಡೆಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಹೀಗಾಗಿ ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿಪಂಚರಾಜ್ಯ ಮತಗಟ್ಟೆ ಸಮೀಕ್ಷೆ | ಬಿಜೆಪಿ ಕಾಂಗ್ರೆಸ್‌ಗೆ ಸಮಬಲ ಸಾಧ್ಯತೆ; ಮಿಜೋರಾಂ ಅತಂತ್ರ!

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗಳ ಮತ ಎಣಿಗೆ ಡಿಸೆಂಬರ್ 3 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಆದರೆ ಮಿಜೋರಾಂನಲ್ಲಿ ಮಾತ್ರ ಡಿಸೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ.

ಮೊದಲ ಹಂತದಲ್ಲಿ ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಆ ನಂತರ ಎಲೆಕ್ಟ್ರಾನಿಕ್ ಯಂತ್ರಗಳ ಮತ (ಇವಿಎಂ) ಎಣಿಕೆ ಆರಂಭವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರಿಗೆ ಭಾನುವಾರ ವಿಷೇಷ ದಿನವಾಗಿದ್ದು, ಏಸು ಕ್ರೀಸ್ತನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಹೀಗಾಗಿ ಅಲ್ಲಿನ ಜನರ ಮನವಿಯ ಮೇರೆಗೆ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ ಚುನಾವಣಾ ಮತ ಎಣಿಕೆಯ ದಿನಾಂಕವನ್ನು ಡಿಸೆಂಬರ್ 3 (ಭಾನುವಾರ) ರಿಂದ ಡಿಸೆಂಬರ್ 4ಕ್ಕೆ (ಸೋಮವಾರ) ಮುಂದೂಡಿದೆ.

ಭಾರತದ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ http://(ttps://results.eci.gov.in/)  ಬಳಸಬಹದು. ಈ ಸೈಟ್‌ನಲ್ಲಿ ನಿಮಗೆ ವೇಗವಾದ ಫಲಿತಾಂಶ ಸಿಗದಿದ್ದರೂ ನಿಖರವಾದ ಮಾಹಿತಿ ಲಭ್ಯವಾಗುತ್ತದೆ.

 

Donate Janashakthi Media

Leave a Reply

Your email address will not be published. Required fields are marked *