4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ವಿಶೇಷಚೇತನ

2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ. ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ವಿಕಲಚೇತನರಿಗೆ ಶಿಕ್ಷಣ ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ’ ಎಂದು ಸಿದ್ದರಾಮಯ್ಯ ಹೇಳಿದರು.

‘ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಾಯೋಕೆ ನನ್ನ 1.5 ಕೋಟಿ ರೂ.ಕಾರೇ ಆಗಬೇಕಿತ್ತಾ| ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ, ವಿಡಿಯೋ ವೈರಲ್

‘ಪ್ರಸಕ್ತ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು 2 ಕೋಟಿ ವೆಚ್ಚದಲ್ಲಿ ಏಳು ಜಿಲ್ಲೆಗಳಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಕಲಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 284.27ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಆದ್ದರಿಂದ ವಿಕಲಚೇತನರು ಸಮಾಜಕ್ಕೆ ಹೊರೆ ಎನ್ನುವ ಸಮಾಜದಲ್ಲಿರುವ ಭಾವನೆಯನ್ನು ದೂರ ಮಾಡಬೇಕಿದೆ’ ಎಂದರು. ವಿಶೇಷಚೇತನ

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ ಉಪಸ್ಥಿತರಿದ್ದರು.

ವಿಡಿಯೋ ನೋಡಿ: ಕಂಪನಿಗಳಿಂದ ಕಾರ್ಮಿಕರ ಶ್ರಮದ ಲೂಟಿ – ಮೀನಾಕ್ಷಿ ಸುಂದರಂ

Donate Janashakthi Media

Leave a Reply

Your email address will not be published. Required fields are marked *