ಬೆಂಗಳೂರು ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆಗೆ ಇಂಟರ್​ಪೋಲ್ ನೆರವು ಕೋರಲಿದ್ದಾರೆ ಪೊಲೀಸರು

ಬೆಂಗಳೂರು: ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 27 ಪ್ರಕರಣಗಳು ದಾಖಲಾಗಿವೆ. ಅಮೆರಿಕ, ಜರ್ಮನಿ, ಮಲೇಷ್ಯಾ ಮತ್ತು ಇತರ ದೇಶಗಳ ಶಾಲೆಗಳಿಗೆ ಕೂಡ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಪ್ರಕರಣದ ಬಗ್ಗೆ ಮಾಹಿತಿ ಕೋರಿ ಕೇಂದ್ರೀಯ ತನಿಖಾ ದಳದ ಇಂಟರ್‌ಪೋಲ್ ವಿಭಾಗಕ್ಕೆ ಪತ್ರ ಬರೆಯಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ 68 ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆ ಇಮೇಲ್ ಬಂದ ನಾಲ್ಕು ದಿನಗಳ ನಂತರ ಪೊಲೀಸರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 27 ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಕೋರಿ ಕೇಂದ್ರೀಯ ತನಿಖಾ ದಳದ ಇಂಟರ್‌ಪೋಲ್ ವಿಭಾಗಕ್ಕೆ ಪತ್ರ ಬರೆಯಲು ಪೊಲೀಸರು ನಿರ್ಧರಿಸಿದ್ದಾರೆ. ಪ್ರಗತಿ ಪರಿಶೀಲನೆಗಾಗಿ ಎಲ್ಲಾ ತನಿಖಾ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ.

ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 27 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಕೂಡ ಇದೇ ರೀತಿಯ ಬೆದರಿಕೆ ಸಂದೇಶಗಳು ಶಾಲೆಗಳಿಗೆ ಬಂದಿದ್ದವು. ಆ ಪ್ರಕರಣಗಳಲ್ಲಿ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣಗಳಲ್ಲಿ ಅಂಥ ಯಾವುದೇ ಸಾಮ್ಯತೆಗಳಿವೆಯೇ ಎಂದು ಕಂಡುಹಿಡಿಯಲು ನಾವು ಎಲ್ಲಾ ತನಿಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ದಯಾನಂದ ಹೇಳಿದರು.

ಆರೋಪಿಯು ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಬೆಂಗಳೂರು ಪೊಲೀಸರು ಆ ಕಂಪನಿಗೆ ಪತ್ರ ಬರೆದು ಅವರಿಂದ ವಿವರ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ಕೋರಿ ಸಿಬಿಐನ ಇಂಟರ್‌ಪೋಲ್ ವಿಭಾಗಕ್ಕೆ ಪೊಲೀಸರು ಪತ್ರ ಬರೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಅಮೆರಿಕ, ಜರ್ಮನಿ, ಮಲೇಷ್ಯಾ ಮತ್ತು ಇತರ ದೇಶಗಳ ಶಾಲೆಗಳಿಗೆ ಕೂಡ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿದ್ದವು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಡಿಸೆಂಬರ್ 1 ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳು ಬಂದಿದ್ದವು. ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ.

Donate Janashakthi Media

Leave a Reply

Your email address will not be published. Required fields are marked *