ವಿಜಯಪುರ: ವಿಜಯಪುರ ತಾಲೂಕಿನ ಉಕಿಮನಾಳ ಗ್ರಾಮದಲ್ಲಿ ಇಂದು (ಶುಕ್ರವಾರ) ಬೆಳಗ್ಗೆ 3ರಷ್ಟು ತೀವ್ರತೆಯ ಭೂಕಂಪವಾಗಿದೆ ಎಂದು ವರದಿಯಾಗಿದೆ.
ಉಕಿಮನಾಳ ಗ್ರಾಮದ ಸುತ್ತಮುತ್ತ ಕೂಡ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಷರ್ ಮಾಪಕದಲ್ಲಿ 3ರಷ್ಟು ಪ್ರಮಾಣ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ದೃಢಪಡಸಿದ್ದಾರೆ.
ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.1 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಭೂಕಂಪದಿಂದಾಗಿ ಜನತೆ ಭಯಭೀತರಾಗಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ಚೆಕ್ | ಚರಕ ಪೂಜೆಯ ಅಣಕು ನರಬಲಿ ಆಚರಣೆ ‘ನಿಜ’ ಎಂಬಂತೆ ವೈರಲ್!
ಕಳೆದ ವರ್ಷ ಹತ್ತಕ್ಕೂ ಹೆಚ್ಚು ಬಾರಿ ಈ ಪ್ರದೇಶದಲ್ಲಿ ಕಂಪನಗಳು ಸಂಭವಿಸಿದ್ದವು.. ತಜ್ಞರು, ದಕ್ಖನ್ ಪ್ರಸ್ಥಭೂಮಿಯ ಈ ಪ್ರದೇಶ ಅಸ್ಥಿರ ಭೂಫಲಕಗಳ ಮೇಲೆ ನಿಂತಿರುವುದರಿಂದ ಭೂಕಂಪನದ ಸಾಧ್ಯತೆಗಳು ಹೆಚ್ಚು ಇವೆ ಎಂದು ಹೇಳಿದ್ದಾರೆ.
ಕಳೆದೆರಡು ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ ಆಗುತ್ತಲೇ ಇದೆ. ಇದರಿಂದ ಜನತೆ ಭಯಭೀತರಾಗಿದ್ದಾರೆ.
ಕರ್ನಾಟಕವಷ್ಟೇ ಅಲ್ಲದೆ, ನೆರೆ ರಾಜ್ಯ ತಮಿಳುನಾಡಿನಲ್ಲೂ ಇಂದು ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ.ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಬೆಳಗ್ಗೆ 7:39ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.2ರಷ್ಟಿತ್ತು ಎಂದು ವರದಿಯಾಗಿದೆ.
ವಿಡಿಯೋ ನೋಡಿ: ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ – ಡಾ. ಮೀನಾಕ್ಷಿ ಬಾಳಿ