ಮುಜಾಫರ್ನಗರ: ಉತ್ತರ ಪ್ರದೇಶದ ಅಲಿಗಢ್ ಜಿಲ್ಲೆಯ ದೆಹಲಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಸೀದಿಯೊಂದರ ಗೋಡೆಯಲ್ಲಿ ದುಷ್ಕರ್ಮಿಗಳು ಜೈಶ್ರೀರಾಂ ಎಂದು ಬರೆದು ವಿವಾದ ಎಬ್ಬಿಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಘಟನೆಯ ನಂತರ ವಿವಾದ ಭುಗಿಲೆದ್ದಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರನ್ನು ಸಮಾಧಾನ ಪಡಿಸಿ, ಅನಾಹುತ ತಪ್ಪಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿದೆ. ಅದರ ನಂತರ, ಸಮುದಾಯದ ಸದಸ್ಯರು ಮತ್ತು ಸಮಾಜವಾದಿ ಪಕ್ಷದ (ಎಸ್ಪಿ) ಮುಖಂಡ ಮನೋಜ್ ಯಾದವ್ ಅಲಿಘರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮೃಗಾಂಕ್ ಶೇಖರ್ ಪಾಠಕ್ ಅವರನ್ನು ಭೇಟಿ ಮಾಡಿ, ಅಪರಿಚಿತ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮಸೀದಿ
ಇದನ್ನೂ ಓದಿ: ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ – ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ
ಘಟನೆ ಬಗ್ಗೆ ಮಾತನಾಡಿರುವ ದೆಹಲಿ ಗೇಟ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಯೋಗೇಶ್ ಸಿಂಗ್, “ಐಪಿಸಿಯ ಐಪಿಸಿ ಸೆಕ್ಷನ್ 505 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಮಸೀದಿ
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖಂಡ ಮನೋಜ್ ಯಾದವ್, ಕೆಲವು ಸಮಾಜ ವಿರೋಧಿಗಳು ಇಂತಹ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ನಗರದ ವಾತಾವರಣವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ವಿವಿಡಿಯೊ ನೋಡಿ: ಅಂಗನವಾಡಿ ನೌಕರರಿಗೆ ಇಡಿಗಂಟು : ಹೈಕೋರ್ಟ್ ನಿರ್ದೇಶನ ಸರಿ ಇಲ್ಲ – ಎಸ್ ವರಲಕ್ಷ್ಮೀ ಆಕ್ರೋಶ