ಬೆಂಗಳೂರು: ವಿಧಾನಪರಿಷತ್ತಿನ ಸಭಾ ನಾಯಕರನ್ನಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯನ್ನು ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತಂತೆ ಬಿಜೆಪಿ ರಾಜ್ಯಾದ್ಯಕ್ಷ ಬಿ. ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವವರಸೂಚನೆ ಮೇರೆಗೆ ವಿಧಾನಸಬೆ ಮತ್ತು ವಿಧಾನ ಪರಿಷತ್ ನ ವಿವಿಧ ಜವಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋದ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಸಚೇತಕರಾಗಿ ಎನ್ ರವೆಕುಮಾರ್ ನೇಮಕ ಮಾಡಲಾಗಿದೆ.
ಇನ್ನು ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡುವುದಾಗಿ ಆದೇಶಿಸಲಾಗಿದೆ.