ದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಭಾರೀ ಅಪಾಯಕಾರಿ ಮಟ್ಟದಲ್ಲಿ ಮುಂದುವರಿದಿದೆ. ದೆಹಲಿಯಲ್ಲಿ ಕೆಲವು ವಾರಗಳಿಂದ ಕೊರೊನಾ ಸೋಂಕು ಶೇ 5.54ರಷ್ಟು ಏರಿಕೆಯಾಗಿದೆ. ಹೆಚ್ಚುತ್ತಿರುವ ಕೊರೊರಾ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದಿನಿಂದ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.
ಭಾರತದಲ್ಲಿ ಸೋಮವಾರ 96,982 ಹೊಸ ಕೊರೊನಾ ವೈರಸ್ ಪ್ರಕರಣಗಳು, 446 ಸಾವುಗಳಾಗಿವೆ ಎಂದು ವರದಿಯಾಗಿದೆ, ಇದರಲ್ಲಿ 47,288 ಪ್ರಕರಣಗಳು ಮಹಾರಾಷ್ಟ್ರದಲ್ಲಿ. ಛತ್ತೀಸ್ಗಡ 7,302 ಪ್ರಕರಣಗಳು ಹೊಸ ಗರಿಷ್ಠ ಏರಿದರೆ, ಮತ್ತು ಕರ್ನಾಟಕದ 5,000 ಗಡಿ ದಾಟಿದೆ. ದೇಶದ ಸಕ್ರಿಯ ಪ್ರಕರಣವು ಈಗ 7,88,223 ರಷ್ಟಿದೆ. ಮಹಾರಾಷ್ಟ್ರದಲ್ಲಿ 164 ಜನರು, ಪಂಜಾಬ್ನಲ್ಲಿ 72 ಮಂದಿ ಮೃತಪಟ್ಟಿದ್ದಾರೆ. ದೇಶದ ಸೋಂಕಿತರ ಸಂಖ್ಯೆ 1,26,86,049 ಕ್ಕೆ ಏರಿದರೆ, ಸಾವಿನ ಸಂಖ್ಯೆ 1,65,547 ರಷ್ಟಿದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ದೇಶದಾದ್ಯಂತ ಕೋವಿಡ್ ಲಸಿಕೆ ನೀಡಿಕೆ ಸಂಖ್ಯೆ 8 ಕೋಟಿ ದಾಟಿದೆ ಎಂದೂ ಸಚಿವಾಲಯ ತಿಳಿಸಿದೆ.
ಕರ್ನಾಟಕದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಲೆ ಇದೆ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ಮಾಹಿತಿ ತಿಳಿದುಬಂದಿದೆ
ಬೆಂಗಳೂರಿನಲ್ಲಿ ಇಂದು 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,65,275ಕ್ಕೆ ಏರಿಕೆಯಾಗಿದೆ. ಇನ್ನು 42483 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 345 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಪ್ರಕಾರ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.