ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆಗೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಸಂಪುಟ ಸಮಿತಿಯು ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಪ್ರಧಾನಿ ಮೋದಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.
ಕೇಂದ್ರದ ವಿವಾದಿತ ರೈತರ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕೆಂದು ಸಮರಶೀಲವಾದ ಹೋರಾಟವನ್ನು ನಡೆಸುತ್ತಿರುವ ಹೋರಾಟದ ದಾರಿಗೆ ಮತ್ತಷ್ಟು ಸುಗಮಗೊಂಡಿದೆ. ಕೇಂದ್ರ ಸಂಪುಟವು ಅನುಮೋದಿಸಿದ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಯು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗದೆ.
ಇದನ್ನು ಓದಿ: ಐತಿಹಾಸಿಕ ರೈತ ಚಳುವಳಿ ಒಂದು ವಿಜಯದ ದಾರಿಯ ಅನುಭವ ನೀಡಿದೆ: ಪುರುಷೋತ್ತಮ ಬಿಳಿಮಲೆ
ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ತಿನ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ರದ್ದುಪಡಿಸುವವರೆಗೂ ಪ್ರತಿಭಟನಾ ಸ್ಥಳಗಳನ್ನು ಬಿಟ್ಟು ಕದಲುವುದಿಲ್ಲವೆಂದು ರೈತರು ಪಟ್ಟುಹಿಡಿದಿದ್ದಾರೆ.
ಕೇಂದ್ರ ಸಂಪುಟವು ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಜತೆಗೆ 26 ಹೊಸ ಮಸೂದೆಗಳನ್ನು ಸಹ ಅಂಗೀಕರಿದೆ. ಈ 27 ಹೊಸ ಮಸೂದೆಗಳನ್ನು ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿವೆ.
ಇದನ್ನು ಓದಿ: ಸರ್ಕಾರ ಶ್ವೇತಪತ್ರ ಹೊರಡಿಸುವವರೆಗೂ ನಾವು ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ: ರೈತ ಮಹಾಪಂಚಾಯತ್ ಘೋಷಣೆ
ಸರ್ಕಾರವು ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನೆ ಮತ್ತು ಸೌಲಭ್ಯ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಒಪ್ಪಂದ, ಕೃಷಿ ಸೇವೆಗಳ ಕಾಯಿದೆ 2020ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020 ಅನ್ನು ರದ್ದುಗೊಳಿಸಿದೆ.
“ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ನಾವು ಮೂರು ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ” ಎಂದಿರುವ ಪ್ರಧಾನಿ ಮೋದಿ ಹೇಳಿದ್ದಾರೆ.
ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕಾನೂನುಗಳನ್ನು ಔಪಚಾರಿಕವಾಗಿ ರದ್ದುಗೊಳಿಸುವವರೆಗೆ ಪ್ರತಿಭಟನಾಕಾರರು ಕಾಯುತ್ತಾರೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ರದ್ದಾಗಲಿರುವ ಕೃಷಿ ಮಸೂದೆಗಳು ಯಾವುವು?
- ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, 2020
2. ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, 2020
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ, 2020