ಉತ್ತರಕನ್ನಡ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ ನಲವತ್ತು ಜನ ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ನಡೆದಿದೆ.
ಪ್ರವಾಸಿಗರು ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಪ್ರವಾಸಿಗರನ್ನು ಹೊತ್ತೋಯ್ದ ಬೋಟ್ ಮುಳುಗಡೆಯಾಗಿ, ಬೋಟ್‌ನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಪ್ರವಾಸೋದ್ಯಮ ಇಲಾಖೆಯ ಅನುಮತಿ ಇಲ್ಲದೇ 28 ಜನರನ್ನು ಕರೆದೊಯ್ಯುವ ಬದಲು 40 ಜನರನ್ನು ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ವಾರಂಟ್ ಜಾರಿ
ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ತಂಡಗಳು ಈ ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ನೋಡಿ: ಖಾಸಗಿ ಆಸ್ಪತ್ರೆಗಳ ಬಣ್ಣದ ಮಾತುಗಳಿಗೆ ಮರುಳಾದರೆ ಜೇಬಿಗೆ ಕತ್ರಿ ಬಿದ್ದಂತೆ – ಮರುಳಸಿದ್ದಪ್ಪ ಮಾತುಗಳು