ಉತ್ತರ ಪ್ರದೇಶ: ಬಾಲಕನೊಬ್ಬ ಸ್ನೇಹಿತರು ನೀಡಿದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಬಟ್ಟೆ
ಮೃತನಾದ ಆಪ್ರಾಪ್ತ ಬಾಲಕನನ್ನು ಆದಿತ್ಯ ಎಂದು ಗುರುತಿಸಲಾಗಿದೆ. ಡಿಸೆಂಬರ್ 20 ರಂದು ಆದಿತ್ಯನನ್ನು ಹುಟ್ಟುಹಬ್ಬದ ಪಾರ್ಟಿಗೆ ಬಾ ಎಂದು ಕರೆದು ಆತನ ಬಟ್ಟೆಯನ್ನು ಬಿಚ್ಚಿಸಿ, ಥಳಿಸಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಇದರಿಂದ ನೊಂದ ಬಾಲಕ, ಆತ್ಮಹತ್ಯೆಗ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಬ್ರಿಟಿಷರು ಗೆದ್ದ ಟಿಪ್ಪು ಸುಲ್ತಾನನ ಖಡ್ಗ ಕಲಕತ್ತಾದ ಮಾರ್ವಾಡಿಗಳ ವಶಕ್ಕೆ ಹೇಗೆ ಬಂತು?
ಈ ಕುರಿತು ಸಿಒ ಪ್ರದೀಪ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ಬಾಲಕ ನೇಣು ಹಾಕಿಕೊಂಡು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಕಪ್ತಂಗಂಜ್ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತಕ್ಷಣ ಕ್ರಮ ಕೈಗೊಳ್ಳದೆ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಸಾವಿಗೂ ಮುನ್ನ ಅದಿತ್ಯನಿಗೆ ತೀವ್ರ ಕಿರುಕುಳ ನೀಡಿದ್ದರು ಎಂದು ಬಾಲಕನ ಕುಟುಂಬದವರು ಆರೋಪಿಸಿದ್ದಾರೆ. ಆತನ ಚಿಕ್ಕಪ್ಪ ವಿಜಯ್ ಕುಮಾರ್ ಪ್ರಕಾರ, ಆಪ್ರಾಪ್ತ ಬಾಲಕನನ್ನು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಿ, ಅಲ್ಲಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದ್ದಾರೆ.
ಪೊಲೀಸರು ಆರಂಭದಲ್ಲಿ ಯಾವುದೇ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದರು. ಆಗ ಕುಟುಂಬದವರು ಬಾಲಕನ ಶವವನ್ನು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಗೆ ಕೊಂಡೊಯ್ದು ಪ್ರತಿಭಟನೆ ನಡೆಸಿದರು. ಗಂಟೆಗಟ್ಟಲೆ ಎಸ್‌ಪಿ ಕಚೇರಿಯ ಹೊರಗೆ ಕುಳಿತ ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ನೋಡಿ: ಅಮಿತ್ ಶಾ, ಸಿ.ಟಿ.ರವಿ ಅನುಚಿತ ವರ್ತನೆ – ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ Janashakthi Media