ಕೋಲಾರ: ಬಂಗಾರಪೇಟೆ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನೊಪ್ಪಿದ್ದಾರೆ. ಇನ್ನೋವಾ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ
ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಕಮಿಷನ್: ಗುತ್ತಿಗೆದಾರರ ಸಂಘ
ಕಾರ್ನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಅಪಘಾತ ನಡೆದಿದೆ.
ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಈಗಾಗಲೇ ಶವಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಕಾರು ನಜ್ಜುಗುಜ್ಜಾಗಿದೆ.
ಇದನ್ನೂ ನೋಡಿ: ವಿಶ್ವವಿದ್ಯಾಲಯಗಳ ಸ್ಥಾಪನೆ, ಮುಚ್ಚುವಿಕೆಯ ರಾಜಕೀಯ ಮೇಲಾಟ, ಬಲಿಪಶುಗಳಾದ ವಿದ್ಯಾರ್ಥಿಗಳು….