ಆನೇಕಲ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ – ಓರ್ವ ಗಂಭೀರ

ಆನೇಕಲ್‌: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ.

ನೆರಳೂರು ರಾಘವ ನಗರದ ಮುನಿರಾಜು ಬಡಾವಣೆಯ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿವೆ. ಆನೇಕಲ್‌

ಇದನ್ನೂ ಓದಿ: ಏರೋ ಇಂಡಿಯಾದ 15 ನೇ ಆವೃತ್ತಿ – ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ

ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ ೭ ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅತ್ತಿಬೆಲೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇದನ್ನೂ ನೋಡಿ: ರೈತ ನಾಯಕ ವಿಜೂ ಕೃಷ್ಣನ್ ಕೇಂದ್ರ ಬಜೆಟ್‌ಗೆ ಸೊನ್ನೆ ಅಂಕ ಕೊಟ್ಟಿದ್ಯಾಕೆ? Janashakthi Media

Donate Janashakthi Media

Leave a Reply

Your email address will not be published. Required fields are marked *