ಉತ್ತರ ಪ್ರದೇಶ| ಇಬ್ಬರು ಮಕ್ಕಳ ಸಹಿತ ದಲಿತ ಕುಟುಂಬದ ನಾಲ್ವರ ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶ: ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿಯಲ್ಲಿ ನಡೆದಿದೆ.. ಉತ್ತರ

ಮೃತರನ್ನು ಸುನೀಲ್ (35) ಪೂನಮ್ (32) ದೃಷ್ಟಿ (6) ಹಾಗೂ ಒಂದು ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ. ಅಮೇಠಿ ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರ ಇರುವ ಪಾನಹುನಾ ಎಂಬಲ್ಲಿ ಸುನೀಲ್ ಸರ್ಕಾರಿ ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅದೇ ಊರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು.

ಇದನ್ನೂ ಓದಿ: ಮೂಲಭೂತ ಆರ್ಥಿಕ ಹಕ್ಕುಗಳನ್ನು ಕೇಳುವ ಸಮಯವೀಗ ಬಂದಿದೆ

“ಗುರುವಾರ ರಾತ್ರಿ ಅವರ ಮನೆಯಿಂದ ಗುಂಡಿನ ಸದ್ದು ಕೇಳಿ ನೆರೆಹೊರೆಯವರು ಓಡಿ ಬಂದಾಗ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವುದು ಗೊತ್ತಾಗಿದೆ. ಸುನೀಲ್ ಕುಟುಂಬಕ್ಕೆ ಪರಿಚಿತರಾಗಿದ್ದವರೇ ಕೃತ್ಯ ಎಸಗಿರುವ ಅನುಮಾನ ಇದೆ. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಎರಡು ವಿಶೇಷ ತಂಡ ರಚಿಸಲಾಗಿದೆ” ಎಂದು ಅಮೇಠಿ ಎಸ್‌ಪಿ ಅನೂಪ್ ಕುಮಾರ್ ಸಿಂಗ್ ಹೇಳಿದ್ದಾರೆ.

ದಲಿತ ಕುಟುಂಬಕ್ಕೆ ಸೇರಿದ ರಾಯ್ ಬರೇಲಿ ಮೂಲದ ಸುನೀಲ್ ಕಳೆದ ತಿಂಗಳು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ರಾಯ್ ಬರೇಲಿಯ ಚಂದನ್ ವರ್ಮಾ ಎನ್ನುವರ ವಿರುದ್ಧ ದೂರು ದಾಖಲಿಸಿದ್ದರು. ನಮಗೇನಾದರೂ ತೊಂದರೆ ಆದರೆ ಚಂದನ್ ವರ್ಮಾನೇ ಹೊಣೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನೂ ನೋಡಿ: ಗಾಂಧಿ ಸರ್ವೋದಯ, ಅಂಬೇಡ್ಕರ್ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿದ್ದರಾಮಯ್ಯJanashakthi Media

Donate Janashakthi Media

Leave a Reply

Your email address will not be published. Required fields are marked *