ಬೆಂಗಳೂರು: ಮೈಸೂರು ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಡೆಲಿವರಿ ಬಾಯ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಾಜಕಾಲುವೆಯಲ್ಲಿ ಕೊಚ್ಚಿಹೋದ ಘಟನೆ ಬೆಳಕಿಗೆ ಬಂದಿದೆ.
ಬ್ಯಾಟರಾಯನಪುರದ ಹೇಮಂತ್ ಕುಮಾರ್ (28) ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ನಡೆಯುತ್ತಿದೆ.
ಹಮಾಲಿ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್ ಕುಮಾರ್ ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮೈಸೂರು ರಸ್ತೆಯ ಜ್ಞಾನಭಾರತಿ ಕಡೆಯಿಂದ ಬ್ಯಾಟರಾಯನಪುರ ಕಡೆಗೆ ಹೋಗುತ್ತಿದ್ದರು.
ಇದನ್ನೂ ಓದಿ: ಮಂಡ್ಯ| ಬೈಕ್ ಡಿಕ್ಕಿ : ಪತ್ರಕರ್ತ ಮಧುಕುಮರ್ ನಿಧನ
ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಆಯತಪ್ಪಿ ರಸ್ತೆ ಪಕ್ಕದ ರಾಜ ಕಾಲುವೆಗೆ ಬಿದ್ದಿದ್ದಾನೆ. ರಾತ್ರಿ ಸುರಿದ ಭಾರಿ ಮಳೆಗೆ ನೀರಿನ ಹರಿವು ಹೆಚ್ಚಾಗಿದ್ದು ಕೊಚ್ಚಿಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ತಡರಾತ್ರಿವರೆಗೂ ಹೇಮಂತ್ ಪತ್ತೆಯಾಗಿರಲಿಲ್ಲ. ಹಾಗಾಗಿ ಶನಿವಾರವೂ ಸುಮಾರು 2-3 ಕಿ.ಮೀ. ಆತ ಪತ್ತೆಯಾಗಿಲ್ಲ. ಭಾನುವಾರ ಕಾರ್ಯಾಚರಣೆ ನಡೆಯಲಿದೆ. ನಾಪತ್ತೆ ಪ್ರಕರಣ ದಾಖಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕಂದಕವಿದ್ದು, ಅದನ್ನು ಮುಚ್ಚಿಲ್ಲ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ನೋಡಿ: ಮುಡಾ ನಿವೇಶನ ಪ್ರಕರಣ | ಬಿಜೆಪಿ ನಾಯಕರಿಂದ ತೇಜೋವಧೆ -ಎಂ. ಲಕ್ಷ್ಮಣ್ ಆರೋಪ Janashakthi Media