ಮುಂಗಾರುಮಳೆ ಕೈಕೊಟ್ಟ ಕಾರಣ ಸಾಲಭಾದೆ ತಡೆಯಲಾರದೆ ರೈತ ಆತ್ಮಹತ್ಯೆ

ಹುಬ್ಬಳ್ಳಿ: ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಹಿಂಗಾರು ಹಾಗೂ ಮುಂಗಾರು ಮಳೆ ‌ಕೈಕೊಟ್ಟ ಹಿನ್ನೆಲೆಯಲ್ಲಿ ಅನ್ನದಾತ ಕಂಗಾಲಾಗಿ ನೇಣುಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68), ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಸುಮಾರು 2 ಲಕ್ಷ ರೂ.ಗಳಷ್ಟು ಕೈ ಸಾಲ ಮಾಡಿಕೊಂಡಿದ್ದ. ಅದಲ್ಲದೆ ಟ್ರ್ಯಾಕ್ಟರ್ ಸಾಲ 4.50 ಲಕ್ಷ ರೂ. ಇತ್ತು. ಆದರೆ, ಹಿಂಗಾರು‌ ಮಳೆಯಾಗಲಿಲ್ಲ.‌ ಈಗ ಮುಂಗಾರು ಮಳೆಯೂ ಸಮಯಕ್ಕೆ ಸರಿಯಾಗಿ ಬಾರದೆ ಬೆಳೆದ ಬೆಳೆಯೆಲ್ಲ ಹಾಳಾಗಿದ್ದು ಇದರಿಂದ ನೊಂದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿಸಾಲಬಾಧೆಗೆ ಬೇಸತ್ತು| ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷರಾದ ಹೇಮನಗೌಡ್ರು ಬಸನಗೌಡರು ಭೇಟಿ ನೀಡಿ ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸರ್ಕಾರದಿಂದ ಮೃತ ರೈತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಬೇಕು, ಅವರ ಕುಟುಂಬಕ್ಕೆ ಸರ್ಕಾರದಿಂದ ಸರಿಯಾದ ಸೌಲತ್ತುಗಳನ್ನು ಕೊಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಯೋಗಪ್ಪನವರ ವಿಟ್ಟಲ್ ಗಾಡಿಗೆ ಗುರುನಾಥ ಹೊನ್ನಳ್ಳಿ ಗ್ರಾಮದ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮೃತ ರೈತನಿಗೆ ಒಂದು ನಿಮಿಷ ಮೌನ ಆಚರಣೆ ಮಾಡಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.


ಯಾರಾದರೂ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆಯಲ್ಲಿದ್ದರೆ, ಅವರಿಗೆ ದಯವಿಟ್ಟು ಸಹಾಯವನ್ನು ಒದಗಿಸಿ. ಇಂತಹ ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಭಾವನಾತ್ಮಕ ಬೆಂಬಲವನ್ನು ನೀಡುವ ಆತ್ಮಹತ್ಯೆ ತಡೆಗಟ್ಟುವಿಕೆ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104

 

ವಿಡಿಯೋ ನೋಡಿ: ಜೀವ ಜಗತ್ತಿನ ಓಟದಲ್ಲಿ ಗೆದ್ದ ಆಮೆಯೆಂಬ ಅದ್ಭುತ ಪ್ರಾಣಿ Janashakthi Media

 

 

Donate Janashakthi Media

Leave a Reply

Your email address will not be published. Required fields are marked *