ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ ರಕ್ಷಾ ಆಸ್ಪತ್ರೆಯಲ್ಲಿ  ಮಂಗಳವಾರ ಅಗ್ನಿ ಅವಘಡ  ಸಂಭವಿಸಿದ್ದು ಸಾರ್ವಜನಿಕರು ಹಾಗೂ ರೋಗಿಗಳ ಆತಂಕಕ್ಕೆ ಕಾರಣವಾಯಿತು.

ಬೆಂಕಿ ಕಾಣಿಸಿಕೊಂಡ ಕೂಡಲೆ ಜನ ಮತ್ತು ಸಿಬ್ಬಂದಿ ಆಸ್ಪತ್ರೆಯಿಂದ ಹೊರಬಂದ ಕಾರಣ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿ ದುರಂತದಲ್ಲಿ ಕಟ್ಟಡವನ್ನು ಸಂಪೂರ್ಣ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದು, ಈ ಬೆಂಕಿ ದುರಂತಕ್ಕೆ ನಿಖರ ಕಾರಣ ಏನು ಎಂಬುದಿನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ; ಲೋಕಸಭಾ ಚುನಾವಣೆ: ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆ ವೀಕ್ಷಣೆ

ಇದನ್ನೂ ನೋಡಿ: ಬಿಜೆಪಿ ಸೋಲಸ್ತೇವೆ – ಮೇ ದಿನಕ್ಕೆ ಕಾರ್ಮಿಕರ ಸಂಕಲ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *