ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 57 ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿರುವ ಸಲೆಟ್ 27ರ ಅವಳಿ ಕಟ್ಟಡಗಳ ಪೈಕಿ ಒಂದು ಕಟ್ಟದ 42ನೇ ಮಹಡಿಯಲ್ಲಿ ಬೆಳಗ್ಗೆ 10.45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅವಘಡದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.ಇದನ್ನೂ ಓದಿ :ಕೇರಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ 30 ರಲ್ಲಿ17 ಸ್ಥಾನಗಳನ್ನು ಗೆದ್ದುಕೊಂಡ ಎಲ್‌ಡಿಎಫ್; ಬಿಜೆಪಿಗೆ ಸೊನ್ನೆ
ಅಗ್ನಿಶಾಮಕ ದಳ, ಮುಂಬೈ ನಾಗರಿಕ ಉಪಯುಕ್ತತೆ ಬೆಸ್ಟ್, ಪೊಲೀಸ್, 108 ಆಂಬ್ಯುಲೆನ್ಸ್ ಸೇವೆಗಳು ಮತ್ತು ಇತರ ಏಜೆನ್ಸಿಗಳ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಎರಡೂವರೆ ಗಂಟೆಗಳಿಗೂ ಹೆಚ್ಚು ಪ್ರಯತ್ನದ ನಂತರ, ಅಗ್ನಿಶಾಮಕ ದಳ ಮಧ್ಯಾಹ್ನ 1.10 ರ ಸುಮಾರಿಗೆ ಬಹುಮಹಡಿ ಕಟ್ಟಡದ 42ನೇ ಮಹಡಿಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸಿತು ಎಂದು ಅವರು ಮಾಹಿತಿ ನೀಡಿದರು.
ಕಟ್ಟಡದ ಭದ್ರತಾ ಸಿಬ್ಬಂದಿಯ ಸಹಾಯದಿಂದ, ಮೇಲಿನ ಮಹಡಿಯಲ್ಲಿ ಸಿಲುಕಿಕೊಂಡಿದ್ದ 50 ರಿಂದ 60 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ಮಹಡಿಯಲ್ಲಿ 2,500 ಚದರ ಅಡಿ ವಿಸ್ತೀರ್ಣದ ಕೋಣೆಯಲ್ಲಿ ವಿದ್ಯುತ್ ತಂತಿಗಳು, ಪೀಠೋಪಕರಣಗಳು ಮತ್ತು ಇತರ ವಸ್ತುಗಳು ಸುಟ್ಟು ಬೂದಿಯಾಗಿವೆ.ಇದನ್ನೂ ಓದಿ :ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ