ಚಿಕ್ಕಬಳ್ಳಾಪುರ: ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ.
ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಮೃತರಾದವರೆಂದು ಗುರುತಿಸಲಾಗಿದೆ. ತಮ್ಮನಾಯಕನಹಳ್ಳಿ ಗೇಟ್‌ನಿಂದ ವೆಂಕಟೇಶ್ ತಮ್ಮ ಊರಾದ ತಮ್ಮನಾಯಕನಹಳ್ಳಿ ನಿವಾಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ನಿಧನ
ಕೃತ್ಯದ ಭೀಕರತೆಗೆ ಕೈಯೊಂದು ತುಂಡಾಗಿ ರಸ್ತೆಯಲ್ಲಿ ಬಿದ್ದಿದೆ. ದುಷ್ಕರ್ಮಿಗಳ ಬಗ್ಗೆ ಹಾಗೂ ಕೃತ್ಯಕ್ಕೆ ಕಾರಣದ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಎಸ್‌ಪಿ ಕುಶಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ನೋಡಿ: ಅಕ್ಷರದವ್ವ ಸಾವಿತ್ರಿಬಾಯಿ ಫುಲೆ | ಮಂಜುಳಾ ಹುಲಿಕುಂಟೆ Janashakthi Media