ಕೋಟಾ (ರಾಜಸ್ಥಾನ): ಇಲ್ಲಿನ ಪ್ರಮುಖ ಶಿಕ್ಷಣ ಕೇಂದ್ರದಲ್ಲಿ ಜೆಇಇ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಇಲ್ಲಿಯವರೆಗೂ 18 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ:ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 4 ದಿನಗಳಲ್ಲಿ 3 ವಿದ್ಯಾರ್ಥಿಗಳ ಆತ್ಮಹತ್ಯೆ
ಕಳೆದ 48 ಗಂಟೆಗಳಲ್ಲಿ ಎರಡನೇ ಆತ್ಮಹತ್ಯೆ ಪ್ರಕರಣ ವದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಭಾರ್ಗವ ಮಿಶ್ರಾ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಬಿಹಾರದ ಚಂಪಾರಣ್ಯದ ನಿವಾಸಿಯಾಗಿದ್ದಾನೆ. ಈ ವರ್ಷದ ಮಾರ್ಚ್‌ನಲ್ಲಿ ಜೆಇಇ ಪರೀಕ್ಷೆಗೆ ತಯಾರಿ ನಡೆಸಲು ಇಲ್ಲಿನ ಪ್ರಮುಖ ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದರು. ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಭಾರ್ಗವ ಮಿಶ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಲಿಸರು ಮಾಹಿತಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ಈ ವರ್ಷದಲ್ಲಿ ಒಟ್ಟು 18 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ವರ್ಷ ಇಲ್ಲಿ15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು. ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್‌ಗಳಿಗೆ ರಾಜ್ಯಸ್ಥಾನದ ಕೋಟಾ ದೇಶದಲ್ಲೇ ಪ್ರಸಿದ್ದಿ ಪಡೆದಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮ ಪರೀಕ್ಷೆಗಳಿಗಾಗಿ ಕೋಚಿಂಗ್ ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಕೋಟಾ ದೇಶದಲ್ಲೇ ಕೋಚಿಂಗ್ ಸೆಂಟರ್‌ಗಳಿಗೆ ಹೆಸರುವಾಗಿಯಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನ ರೂಪಿಸಬೇಕಾದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಾದರೂ ಇಂತಹ ಪ್ರಕರಣಗಳಿಗೆ ಕಡಿವಾಣ ಬೀಳಬಹುದಾ ಎಂಬುದನ್ನು ಕಾದು ನೋಡಬೇಕಾಗಿದೆ.