ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ 3 ದಿನಗಳು ಮಾತ್ರ ಬಾಕಿ ಇದ್ದು, ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಕಾಮನ್ ಡಿಪಿ ರಿಲೀಸ್ ಮಾಡೋಕೆ ಕಾಯ್ತಿದ್ದಾರೆ. ಇನ್ನು ‘ಟಾಕ್ಸಿಕ್’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಇದೆಲ್ಲದರ ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಯಶ್
ಯಶ್ ಪತ್ರ ನೋಡಿ ಅಭಿಮಾನಿಗಳು ಬೇರಸಗೊಂಡಿದ್ದಾರೆ. “ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ..ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು.. ಸದಾಕಾಲ ನನ್ನ ಜೊತೆ ಇರುವ. ನಿಮ್ಮ ಪ್ರೀತಿ, ಅಭಿಮಾನವೇ. ನನಗೆ ಹುಟ್ಟುಹಬ್ಬದ ಉಡುಗೊರೆ.ನಿಮ್ಮ ಪ್ರೀತಿಯ ಯಶ್” ಎಂದು ಬರೆದಿದ್ದಾರೆ. ಯಶ್
ಇದನ್ನು ಓದಿ : “ಕಾಟೇರ” ಪಾಳೆಗಾರಿ ಮತ್ತು ಜಾತಿ ವ್ಯವಸ್ಥೆ ವಿರುದ್ಧದ ಧ್ವನಿ
‘ಟಾಕ್ಸಿಕ್’ ಎನ್ನುವ ಇಂಟ್ರೆಸ್ಟಿಂಗ್ ಟೈಟಲ್ ಇರುವ ಸಿನಿಮಾದಲ್ಲಿ ಯಶ್ ನಟಿಸುತ್ತಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಂದಾಜು 170 ಕೋಟಿ ರೂ. ಬಜೆಟ್‌ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣ, ಪ್ರಮೋಷನ್, ರಿಲೀಸ್ ಪ್ಲ್ಯಾನ್ ನಡೀತಿದೆ. 2019ರಲ್ಲಿ ಕೋವಿಡ್‌ಗೂ ಮುನ್ನ ಯಶ್ ನಗರದ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ, 5000 ಕೆಜಿ ಕೇಕ್ ತಂದು ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಿದ್ದರು. ಆ ವರ್ಷ ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿ ಆಗಿದ್ದರು. ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಿ ಕೈ ಕುಲುಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಯಶ್
ಇತ್ತೀಚೆಗೆ ಯಶ್ ಆಪ್ತರ ಜೊತೆ ವಿಮಾನದ ಮುಂದೆ ನಿಂತ ಫೋಟೊ ವೈರಲ್ ಆಗಿತ್ತು. ಯಶ್ ಈಗಾಗಲೇ ವಿದೇಶಕ್ಕೆ ತೆರಳಿದ್ದಾರೆ. ಅದೇ ಕಾರಣಕ್ಕೆ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಯಶ್ ನಡೆ ಅಭಿಮಾನಿಗಳಿಗೆ ಬೇಸರ ತಂದಿರುವುದು ಸುಳ್ಳಲ್ಲ. ಇನ್ನು ಶೀಘ್ರದಲ್ಲೇ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ಯಶ್