ನವದೆಹಲಿ: ಮಂಗಳವಾರ ಬೆಳಿಗ್ಗೆ ರೋಹಿಣಿಯ ಪ್ರಶಾಂತ್ ವಿಹಾರ್‌ನಲ್ಲಿರುವ ತನ್ನ ಮನೆಯ ಬಳಿ ವಾಕಿಂಗಿಗೆ ಹೊರಟಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡ ಹಿಟ್ ಅಂಡ್ ರನ್ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಕಿಂಗಿಗೆ
ಸೆಕ್ಟರ್ 14, ರೋಹಿಣಿಯಲ್ಲಿ ನಡೆದ ಅಪಘಾತದ ಬಗ್ಗೆ ಬೆಳಿಗ್ಗೆ 6.36 ಕ್ಕೆ ಪೊಲೀಸರಿಗೆ ಪಿಸಿಆರ್ ಕರೆ ಬಂದಿತು. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಹತ್ಯೆಗೀಡಾದವರನ್ನು ಪ್ರಶಾಂತ್ ವಿಹಾರ್ ನಿವಾಸಿ ಹರಿ ಕಿಶನ್ ಜಿಂದಾಲ್ (62) ಎಂದು ಗುರುತಿಸಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಅತಿವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣಗಳನ್ನು ದಾಖಲಿಸಿದ್ದಾರೆ. ಆರೋಪಿ ಚಾಲಕ ಸದ್ಯ ತಲೆಮರೆಸಿಕೊಂಡಿದ್ದಾನೆ.
ಇದನ್ನೂ ಓದಿ: ಇವಿಎಂ ಯಂತ್ರಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ
ಜಿಂದಾಲ್ ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ. ಅವರು ಮಾಜಿ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದರು ಮತ್ತು 2020 ರಲ್ಲಿ ವಜೀರ್‌ಪುರದಿಂದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
“ಹರಿ ಕಿಶನ್ ಜಿಂದಾಲ್ ನಿಧನದಿಂದ ದೆಹಲಿ ಕಾಂಗ್ರೆಸ್ ಬಲಿಷ್ಠ ಮತ್ತು ಸಮರ್ಪಿತ ನಾಯಕನನ್ನು ಕಳೆದುಕೊಂಡಿದೆ. ಅವರು ದಶಕಗಳಿಂದ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದರು.” ಎಂದು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷ ದೇವೇಂದ್ರ ಯಾದವ್ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಿ: ಪೆನ್‌ಡ್ರೈವ್ ಪ್ರಕರಣ : ರೇವಣ್ಣ, ಪ್ರಜ್ವಲ್ ರೇವಣ್ಣ ಶೀಘ್ರ ಬಂಧನಕ್ಕೆ ಆಗ್ರಹ Janashakthi Media