ತಿರುಪತಿಗೆ ತೆರಳುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ; 9 ಮಂದಿ ಸಾವು

ಆಂದ್ರ ಪ್ರದೇಶ: ಇಂದು ಮುಂಜಾನೆ, ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್​ಗೆ ಕೋಲಾರದ ಬಳಿ ಭಾರಿ ಅಪಘಾತ ಸಂಭವಿಸಿದೆ.

ಲಾರಿಯು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕನ್ನಡ ನಿರೂಪಕಿ ಅಪರ್ಣಾ ನಿಧನ

ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಈ ಬಸ್ ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರೊಂದಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ನೋಡಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರಗಾಯ Janashakthi Media

Donate Janashakthi Media

Leave a Reply

Your email address will not be published. Required fields are marked *