ಅಹಿಂದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯ : ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ವಿದ್ಯಾರ್ಥಿ ವಿರೋಧಿ ನೀತಿಯನ್ನು ಖಂಡಿಸಿ ಇಂದು ರಾಜ್ಯವ್ಯಾಪಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಪ್ರತಿಭಟನೆ ನಡೆಸಿದೆ.

ಗಂಗಾವತಿಯಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ್‌ ಕಡಗದ್‌, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ SSLC ಯಲ್ಲಿ ಶೇಕಡಾ 60 ರಿಂದ 74.99 ಫಲಿತಾಂಶ ದೊಂದಿಗೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 7000 ಪ್ರೋತ್ಸಧನ ಹಣವನ್ನು ಕೊಡುತ್ತ ಇದ್ದದನ್ನು ಈ ಶೈಕ್ಷಣಿಕ ವರ್ಷದಲ್ಲಿ ರದ್ದು ಮಾಡಿದ್ದಾರೆ ಎಂದು ಹೇಳಿದರು.

SCP/TSP ಯೋಜನೆಗಾಗಿ ಸಾವಿರಾರು ಕೋಟಿ ರೂಪಾಯಿ ಹಣ ಖರ್ಚು ಮಾಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೆ ಒಂದು ಸಾರಿ ನಿಮ್ಮ ಇಲಾಖೆಯ ಪರಿಸ್ಕೃತ ಆದೇಶವನ್ನು ನೋಡಿ ಶೋಷಿತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಉತ್ತೇಜಿಸಲು ಯೋಜನೆಗಳನ್ನು ರೂಪಿಸಬೇಕೆ ಆದರೆ ಆ ಯೋಜನೆಗಳಿಗೆ ಕತ್ತರಿ ಪ್ರಯೋಗ ಪರಿಸ್ಕೃತ ಆದೇಶದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಏನು ಹೇಳಲು ಬಯಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಲವಂತದ ಭೂಸ್ವಾಧೀನ ವಿರೋಧಿಸಿ ಹೋರಾಟ : ಸಿಎಂ ಮನೆಗೆ ಹೊರಟಿದ್ದ ರೈತರ ಮೇಲೆ ಪೋಲಿಸ್ ದೌರ್ಜನ್ಯ

ಹಿಂದುಳಿದ ವರ್ಗಗಳ ಸಮುದಾಯದ ಮುಖ್ಯಮಂತ್ರಿ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಮರುಪಾವತಿ ವಿಷಯಕ್ಕೆ ಪರಿಷ್ಕೃತ ಆದೇಶವನ್ನು ಹೊರಡಿಸಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಮಾತ್ರ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿದ್ದಾರೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಹತೆ ಹೊಂದಿಲ್ಲ. ಅವರಿಗೆ ಶುಲ್ಕ ಮರುಪಾವತಿ ಕೊಡವುದಿಲ್ಲ ಎಂದು ಹೇಳುತ್ತಿದ್ದಾರೆ ಸಮಾಜಿಕ ನ್ಯಾಯದ ಬಗ್ಗೆ ಮಾತನಾಡವು ಮುಖ್ಯಮಂತ್ರಿಗಳೇ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಯಾವಗ ಸರಿ ಪಡಿಸುತ್ತಿರಿ ಎಂದು ಕೇಳಿದರು.

ಗಂಗಾವತಿಯಲ್ಲಿ ನಡೆದ ಪ್ರತಿಭಟನೆ

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಪರವಾಗಿ ನಮ್ಮ ಸರ್ಕಾರ ಅಲ್ಪಸಂಖ್ಯಾತರ ರಕ್ಷಣೆಗಾಗಿ ಬದ್ದ ಇದೆ ಎಂದು ಹೇಳುತ್ತಿರುವ ಮುಖ್ಯಮಂತ್ರಿಗಳೇ ಇದೇ ಅಲ್ಪಸಂಖ್ಯಾತ ಸಮುದಾಯದ ಸಂಶೋಧನಾ ಮಾಡುತ್ತಿರುವ ಪಿಎಚ್ಡಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಇದ್ದ ಪ್ರೋತ್ಸಾಹ ಧನವನ್ನು 25000 ರೂಪಾಯಿ ದಿಂದ 10000 ಸಾವಿರ ರೂಪಾಯಿ ಈ ಹಿಂದಿನ ಬಿಜೆಪಿ ಸರಕಾರ ಕಡಿತ ಮಾಡಿತ್ತು. ಅದನ್ನು ಸರಿಪಡಿಸಿ ಎಂದು ಒಂದು ವರ್ಷದಿಂದ ಸಂಬಂಧಿಸಿದ ಸಚಿವರಿಗೆ ಮನವಿ ಪತ್ರ ಕೊಡುತ್ತ ಬಂದರು ಯಾಕೆ ಸರಿಮಾಡುತ್ತ ಇಲ್ಲ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ, ತಾಲ್ಲೂಕು ಅಧ್ಯಕ್ಷ ಗ್ಯಾನೇಶ ಕಡಗದ, ಕಾರ್ಯದರ್ಶಿ ಶಿವಕುಮಾರ, ಪ್ರಮುಖರಾದ ನಾಗರಾಜ ಉತ್ತನೂರ, ಹನುಮಂತ ಮುಕ್ಕಂಪಿ, ಬಾಲಜಿ, ಶರೀಫ್, ಮೌನೇಶ, ದರ್ಶನ ಹೋಸ್ಕರ, ಪ್ರಶಾಂತ, ಬಸಯ್ಯ ಇತರರು ಇದ್ದರು.

ಹಾವೇರಿಯಲ್ಲಿ ನಡೆದ ಪ್ರತಿಭಟನೆ

 

ಇದನ್ನೂ ನೋಡಿ: ಏಕಾಏಕಿ ಕತ್ತು ಹಿಡಿದು ತಳ್ಳಿದರೆ ನಮ್ಮ ಬದುಕು ಬೀದಿಗೆ ಬರುತ್ತೆ – ಬಿಡಿಎ ಖಾಸಗೀಕರಣದ ವಿರುದ್ಧ ವರ್ತಕರ ಆಕ್ರೋಶ

Donate Janashakthi Media

Leave a Reply

Your email address will not be published. Required fields are marked *