ಪಹಲ್ಗಾಮ್ ಭಯೋತ್ಪಾದಕ ದಾಳಿ: ನಮ್ಮ ಆತಿಥ್ಯ ಸಂಪ್ರದಾಯಕ್ಕೆ ಕಳಂಕ – ಸ್ಥಳೀಯರು ಆಕ್ರೋಶ

ಜಮ್ಮು ಮತ್ತು ಕಾಶ್ಮೀರ: ಮಂಗಳವಾರ ಏಪ್ರಿಲ್‌ 22ರಂದು ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಕಣಿವೆಯ ರೆಸಾರ್ಟ್ ಪ್ರದೇಶದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದೂ, ಈ ದಾಳಿಯಲ್ಲಿ 26ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಈ ಘಟನೆಯಲ್ಲಿ ಹಲವು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

“ಈ ದಾಳಿಯಿಂದ ನಾವು ತೀವ್ರ ಅಸಮಾಧಾನಗೊಂಡಿದ್ದೇವೆ. ಪ್ರವಾಸಿಗರ ಮೇಲಿನ ಈ ದಾಳಿ ನಮ್ಮ ಆತಿಥ್ಯ ಸಂಪ್ರದಾಯಕ್ಕೆ ಕಳಂಕವಾಗಿದೆ. ಈ ಘಟನೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ತಿಳಿಸುತ್ತೇವೆ. ಇಂತಹ ಘಟನೆ ಸಂಭವಿಸಬಾರದಿತ್ತು” ಎಂದು ಸ್ಥಳೀಯ ನಿವಾಸಿ ಉಮರ್ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಂವಿಧಾನ ವಿರೋಧಿ, ವಿಭಜಕ ವಕ್ಫ್ ತಿದ್ದುಪಡಿ ಕಾಯ್ದೆ; ನಾಗರೀಕ ಸಮಾಜ ವಿರೋಧಿಸಬೇಕು: ಪ್ರೋ ಕೆ ದೋರೈ ರಾಜು

ದಾಳಿಯ ಬಳಿಕ, ಭದ್ರತೆಯನ್ನು ಬಿಗಿಗೊಳಿಸಲು ಸಿಆರ್‌ಪಿಎಫ್‌ನ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಪಹಲ್ಗಾಮ್ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಗುಪ್ತಚರ ಏಜೆನ್ಸಿಗಳ ಪ್ರಕಾರ, ಈ ದಾಳಿಯ ಹಿಂದೆ ಟಿಆರ್‌ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಭಯೋತ್ಪಾದಕ ಸಂಘಟನೆಯ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ. 2-3 ದಾಳಿಕೋರರು ಯೋಜಿತವಾಗಿ ದಾಳಿ ನಡೆಸಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ.

ತನಿಖೆ ಆರಂಭ:

ಭಾರತೀಯ ಸೇನೆ, ಸಿಆರ್‌ಪಿಎಫ್, ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ತಂಡ ಜಂಟಿಯಾಗಿ ತನಿಖೆ ಆರಂಭಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಶೀಘ್ರದಲ್ಲಿ ಈ ಪ್ರಕರಣವನ್ನು ವಹಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯಿಂದ ಪಹಲ್ಗಾಮ್‌ನ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ಆಘಾತವಾಗಿದ್ದು, ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಇದನ್ನೂ ನೋಡಿ: Use of this & that | English grammar Janashakthi Media

Donate Janashakthi Media

Leave a Reply

Your email address will not be published. Required fields are marked *