ಹೊಸಕೋಟೆ: ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ

Please follow and like us:
ಹೊಸಕೋಟೆ: ವಿದ್ಯಾರ್ಥಿ ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದಾಗ  ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮೇಲೆ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಸಿಪಿಐ ಕಿರುಕುಳ: ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನ

ಸಂಜೆ ಟ್ಯೂಷನ್ ಮುಗಿಸಿ ವಾಪಸ್ ಆಗುತ್ತಿದ್ದ ವಿಧ್ಯಾರ್ಥಿ ಸೈಯದ್‌ ಇಶಾನ್ ಎಂಬಾತನ ಮೇಲೆ 9 ಜನರ ಗುಂಪೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಸಂಬಂಧ ಹೊಸಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಖಾದೀರ್, ನವಾಜ್, ಫಾರಜ್, ಮಸ್ತಾನ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ನೋಡಿ : ಮರಕುಂಬಿ ಪ್ರಕರಣ ; 97 ಮಂದಿಗೆ ಜಾಮೀನು | ಜಾಮೀನನ್ನು ಸಂಭ್ರಮಸಲು ಸಿದ್ದತೆ ನಡೆದಿತ್ತು – ಮರಕುಂಬಿ ಬಸವರಾಜ

Please follow and like us:
Donate Janashakthi Media

Leave a Reply

Your email address will not be published. Required fields are marked *