ಹಾರೋಹಳ್ಳಿ| ಮಾನಸಿಕ ಒತ್ತಡಕ್ಕೆ ಒಳಗಾಗಿ‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಹಾರೋಹಳ್ಳಿ: ಹಾರೋಹಳ್ಳಿ ಬಳಿಯ ದಯಾನಂದ ಸಾಗರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕೇರಳದ ಕಣ್ಣೂರು ಗ್ರಾಮದ ಅನಾಮಿಕ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಹಾರೋಹಳ್ಳಿ

ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರವಾದ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ.ರಾತ್ರಿ ಊಟಕ್ಕೆ ಬಾರದಿದ್ದಾಗ ಸ್ನೇಹಿತೆಯರು ಆಕೆಯ ಕೊಠಡಿ ಬಳಿ ಹೋಗಿ ಬಾಗಿಲು ತಟ್ಟಿ ಕೂಗಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ| ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ಅಧಿಕಾರಿ ಪ್ರಿಯಾ ದಿಢೀರ್ ದಾಳಿ

ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಗಾಬರಿಗೊಂಡು ಕಿಟಕಿಯಿಂದ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ತಕ್ಷಣ ಹಾಸ್ಟೆಲ್ ವಾರ್ಡ್ನ್ಗೆ ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು,ಅದರಲ್ಲಿ ಅಮ್ಮ ನನ್ನನ್ನು ಕ್ಷಮಿಸು ನನಗೆ ಟಾರ್ಚರ್ ಆಗುತ್ತಿದೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ನೋಡಿ: ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತ ಜಿ.ಸಿ. ಬಯ್ಯಾರೆಡ್ಡಿ – ಬರಗೂರು ರಾಮಚಂದ್ರಪ್ಪ Janashakthi Media

Donate Janashakthi Media

Leave a Reply

Your email address will not be published. Required fields are marked *