ಮಂಗಳೂರು: ಪುತ್ತೂರಿನಲ್ಲಿ ಶಿಕ್ಷಕರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಕಲ್ಲೇರಿ ಮೂಲದ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ವಿದ್ಯಾರ್ಥಿನಿ ಪಡೀಲುನಲ್ಲಿ ವಾಸವಿದ್ದರು. ಆಕೆ ಶಿಕ್ಷಕರು ಕಿರುಕುಳ ನೀಡುತ್ತಾರೆ ಎಂದು ಮನನೊಂದು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಆಕೆಯ ಕುಟುಂಬಸ್ಥರು ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಶೋಷಿತರ ಮೇಲೆ – ಬಿ.ವಿ ರಾಘವಲು
ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆ ಮಾತನಾಡಿ, ಶಾಲಾ ಶಿಕ್ಷಕರ ಕಿರುಕುಳದಿಂದ ವಿದ್ಯಾರ್ಥಿನಿ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಆರೋಪಿಸಿದರು. ಸದ್ಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಇದನ್ನೂ ನೋಡಿ: ದಮನಿತರ ಪರವಾಗಿ ಕೆಂಬಾವುಟ ಮಾತ್ರವೇ ನಿಲ್ಲಲು ಸಾಧ್ಯ- ಎಂ.ಎ.ಬೇಬಿ